ಲಂಡನ್ ನಲ್ಲಿ ಭಾರತೀಯ ವಿದ್ಯಾರ್ಥಿ ಸಾವು, ಆಂಧ್ರದ ನಾಲ್ವರಿಗೆ ಗಾಯ!

ಲಂಡನ್ : ರಸ್ತೆ ಅಪಘಾತದಲ್ಲಿ 30 ವರ್ಷದ ಭಾರತೀಯ ವಿದ್ಯಾರ್ಥಿ ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಪೂರ್ವ ಇಂಗ್ಲೆಂಡ್ನ ಲೀಸೆಸ್ಟರ್ಶೈರ್‌ನಲ್ಲಿ ಮಂಗಳವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರು ಹಾಗೂ ಮೃತ ಆಂಧ್ರಪ್ರದೇಶಕ್ಕೆ ಸೇರಿದವರಾಗಿದ್ದಾರೆ ಎಂದು ತಿಳಿದು ಬಂದಿದೆ.

ಚಿರಂಜೀವಿ ಪಾಂಗುಲೂರಿ(30) ಘಟನಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈತನೊಂದಿಗಿದ್ದ ಸಹ ಸವಾರರಾದ ಓರ್ವ ಮಹಿಳೆ, ಇಬ್ಬರು ಪುರುಷರು ಹಾಗೂ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಾಯಕಾರಿ ಚಾಲನೆ ಘಟನೆಗೆ ಕಾರಣವಾಗಿದ್ದು, 27 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿತ್ತು. ಆದರೆ, ಆತ ಜಾಮೀನಿನ ಮೇಲೆ ಹೊರ ಬಂದಿದ್ದಾನೆ. ಇವರೆಲ್ಲರೂ ಬೂದು ಬಣ್ಣದ ಮಜ್ದಾ 3 ತಮುರಾ ಕಾರಿನಲ್ಲಿ ಕೌಂಟಿಯಿಂದ ಲೀಸೆಸ್ಟರ್ಶೈರ್‌ನಿಂದ ಮಾರ್ಕೆಟ್ ಹಾರ್ಬರೋ ಕಡೆಗೆ ಪ್ರಯಾಣಿಸುತ್ತಿದ್ದರು ಹಾಗೂ ಘಟನೆ ನಡೆದಾಗ ಡ್ಯಾಶ್ ಕ್ಯಾಮ್ನಲ್ಲಿ ಯಾವುದಾದರೂ ದೃಶ್ಯಗಳುನ ಸೆರೆಯಾಗಿದೆಯೇ ಎಂದು ಪರಿಶೀಲಿಸಲಾಗುತ್ತಿದೆ ಎಂದು ಲೀಸೆಸ್ಟರ್‌ಶೈರ್ ಪೊಲೀಸರ ಹೇಳಿಕೆ ತಿಳಿಸಿದೆ.

Related Posts

ಈ ವರ್ಷದಲ್ಲಿ ಮೋದಿ ಕಂಡ ಭಾರತ…..?

ಪ್ರಧಾನಿ ಆಡಳಿತಕ್ಕೆ ಬಂದ ನಂತರದಲ್ಲಿ ಇಡೀ ವಿಶ್ವವೇ ಭಾರತವನ್ನು ತಿರುಗಿ ನೋಡುವಂತೆ ಮಾಡಿದ್ದಾರೆ. ಸಾಮಾಜಿಕ, ಆರ್ಥಿಕ, ಮೂಲಸೌಕರ್ಯ, ಆರೋಗ್ಯ ರಕ್ಷಣೆ ಹೀಗೆ ಹತ್ತು ಹಲವು ಕ್ಷೇತ್ರದ ಅಭಿವೃದ್ಧಿಗಾಗಿ ನೂರಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. 2024 ರ ಜೂನ್ 9 ರಂದು ಸತತ…

ಅಲ್ಲು ಅರ್ಜುನ್ ಭೇಟಿಯಾದ ಉಪೇಂದ್ರ – ‘ಯುಐ’ ಸಿನಿಮಾಗೆ ಪುಷ್ಪರಾಜ್ ಸಾಥ್……..

‘ಯುಐ’ ಸಿನಿಮಾದ ಪ್ರಮೋಷನ್ಗಾಗಿ ಹೈದರಾಬಾದ್ಗೆ ತೆರಳಿದ್ದ ಉಪೇಂದ್ರ ಅವರು ಪುಷ್ಪಾ 2 ನಟ ಅಲ್ಲು ಅರ್ಜುನ್ ಭೇಟಿಯಾಗಿದ್ದಾರೆ. ಈ ಹಿಂದೆ ‘ಸನ್ ಆಫ್ ಸತ್ಯಮೂರ್ತಿ’ ಸಿನಿಮಾದಲ್ಲಿ ಈ ಇಬ್ಬರೂ ನಟರು ಒಟ್ಟಿಗೆ ನಟಿಸಿದ್ದರು. ಉಪ್ಪಿ ನಟಿಸಿ ನಿರ್ದೇಶನ ಮಾಡಿದ ‘ಯುಐ’ ಚಿತ್ರಕ್ಕೆ…

Leave a Reply

Your email address will not be published. Required fields are marked *

You Missed

ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್…

ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್…

ಪಾರ್ಸೆಲ್ನಲ್ಲಿ ಇತ್ತು ಮಾನವನ ಶ*: ಬೆಚ್ಚಿಬಿದ್ದ ಮಹಿಳೆ!

ಪಾರ್ಸೆಲ್ನಲ್ಲಿ ಇತ್ತು ಮಾನವನ ಶ*: ಬೆಚ್ಚಿಬಿದ್ದ ಮಹಿಳೆ!

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ..

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ..

ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡೋದಿಲ್ಲ : ಸಿಎಂ ಸಿದ್ದರಾಮಯ್ಯ

ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡೋದಿಲ್ಲ : ಸಿಎಂ ಸಿದ್ದರಾಮಯ್ಯ

ಸಾರಿಗೆ ಇಲಾಖೆಯಿಂದ ವೈಟ್ ಬೋರ್ಡ್ ಟ್ರಾವೆಲ್ಸ್ ಮಾಲೀಕರಿಗೆ ಬಿಗ್ ಶಾಕ್.

ಸಾರಿಗೆ ಇಲಾಖೆಯಿಂದ ವೈಟ್ ಬೋರ್ಡ್ ಟ್ರಾವೆಲ್ಸ್ ಮಾಲೀಕರಿಗೆ ಬಿಗ್ ಶಾಕ್.

ಎಷ್ಟೇ ರೇಡ್ ಮಾಡಿದ್ರೂ ಅದೇ ರಾಗ ಅದೇ ಹಾಡು : ಪರಪ್ಪನ ಅಗ್ರಹಾರ ಜೈಲಿನಲ್ಲಿ‌ ಮತ್ತೆ ಮೊಬೈಲ್ ಸೌಂಡ್!

ಎಷ್ಟೇ ರೇಡ್ ಮಾಡಿದ್ರೂ ಅದೇ ರಾಗ ಅದೇ ಹಾಡು : ಪರಪ್ಪನ ಅಗ್ರಹಾರ ಜೈಲಿನಲ್ಲಿ‌ ಮತ್ತೆ ಮೊಬೈಲ್ ಸೌಂಡ್!