ಲೈಂಗಿಕ ದೌರ್ಜನ್ಯ ವಿರುದ್ಧ ಚಾಟಿಯಿಂದ ಹೊಡೆದುಕೊಂಡು ವಿನೂತನವಾಗಿ ಪ್ರತಿಭಟನೆ ಮಾಡಿದ ಅಣ್ಣಾಮಲೈ..!

ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಚಾಟಿಯಿಂದ ತಮಗೆ ಹೊಡೆದುಕೊಳ್ಳುವ ಮೂಲಕ ಹೆಣ್ಣುಮಕ್ಕಳ ಲೈಂಗಿಕ ದೌರ್ಜನ್ಯ ವಿರುದ್ಧ ಪ್ರತಿಭಟಿಸಿದರು. ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಅಣ್ಣಮಲೈ ಭೀಷ್ಮ ಶಪತ ಕೈಗೊಂಡಿದ್ದು. ಡಿಎಂಕೆ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ಚಪ್ಪಲಿ ಧರಿಸುವುದಿಲ್ಲ ಎಂದು ಶಪಥ ಮಾಡಿದ್ದಾರೆ.
ಇಂದು ಬೆಳಗ್ಗೆ ಅವರ ನಿವಾಸದ ಮುಂದೆ ಚಾಟಿಯಿಂದ ಹೊಡೆದುಕೊಂಡು ತಮಗೆ ತಾವೇ ನೋವು ಮಾಡಿಕೊಂಡಿದ್ದಾರೆ. ಅಣ್ಣಾ ಯೂನಿರ್ವಸಿಟಿಯಲ್ಲಿ ಓದುತ್ತಿದ್ದ ಇಂಜಿನಿಯರಿಂಗ್ ವಿಧ್ಯಾರ್ಥಿನಿಯ ಮೇಲೆ ಕಾಲೇಜು ಕ್ಯಾಂಪಸ್ನಲ್ಲಿ ಅತ್ಯಾಚಾರ ನಡೆದಿದೆ. ಇದರ ವಿರುದ್ಧ ವಿಧ್ಯಾರ್ಥಿನಿ ಪೊಲೀಸರಿಗೆ ದೂರನ್ನು ನೀಡಿದ್ದರು.

ಪೊಲೀಸರು ಜ್ಞಾನಶೇಖರನ್ ಎಂಬಾತನನ್ನು ಬಂಧಿಸಿದ್ದರು. ಈತ ಯುವತಿಯ ಖಾಸಗಿ ವಿಡೀಯೋ ಚಿತ್ರಿಕರಿಸಿಕೊಂಡು ಬ್ಲಾಕ್ಮೇಲ್ ಮಾಡಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದನು ಎಂಬ ಆರೋಪವಿದೆ. ಆರೋಪಿಯ ಮೇಲೆ 2011ರಲ್ಲಿಯೂ ಇದೇ ರೀತಿಯ ಪ್ರಕರಣ ದಾಖಲಾಗಿದ್ದು. ಈತನ ವಿರುದ್ದ ಸುಮಾರು 17 ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಆದರೂ ಈ ಆರೋಪಿ ಸ್ವತಂತ್ರ್ಯವಾಗಿ ಓಡಾಡುತ್ತಿದ್ದಾನೆ.
ಡಿಎಂಕೆ ಸರ್ಕಾರದ ಆಡಳಿತದಲ್ಲಿ ವಿದ್ಯಾರ್ಥಿನಿಯರಿಗೆ ಭದ್ರತೆ ಇಲ್ಲ ಎಂದು ಆರೋಪಿಸಿ ತಮಿಳುನಾಡು ಬಿಜೆಪಿ ಮತ್ತು ಎಐಎಡಿಎಂಕೆ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಜೊತೆಗೆ 48 ದಿನಗಳ ಸುದೀರ್ಘ ಉಪವಾಸ ಕೈಗೊಂಡಿರುವ ಅಣ್ಣಾಮಲೈ , ಆರು ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ .

Related Posts

ಬೆಳ್ಳಂಬೆಳಗ್ಗೆ ಪುತ್ತೂರಿನ ಪರ್ಲಡ್ಕದಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾ*.

ದಕ್ಷಿಣ ಕನ್ನಡ : ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರಿನ ಪರ್ಲಡ್ಕದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ದುರಂತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರಾದವರನ್ನು ಸುಳ್ಯದ ಜಟ್ಟಿಪಳ್ಳ ನಿವಾಸಿಗಳು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ತಂದೆ – ಮಗ ಹಾಗೂ…

ನಿಗಮಬೋಧ್ ಘಾಟ್‌ನಲ್ಲಿ ಆರ್ಥಿಕ ಸುಧಾರಣೆಗಳ ಹರಿಕಾರ ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್​ ಅಂತ್ಯಕ್ರಿಯೆ.

ನವದೆಹಲಿ: ಗುರುವಾರ ಅನಾರೋಗ್ಯದಿಂದ ಇಹಲೋಕ ತ್ಯಜಸಿರುವ ಭಾರತದ ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಡಾ. ಮನಮೋಹನ್​ ಸಿಂಗ್​ ಅಂತ್ಯಕ್ರಿಯೆ ದೆಹಲಿಯ ನಿಗಮಬೋಧ್ ಘಾಟ್‌ನಲ್ಲಿ ಸಿಖ್​ ಸಂಪ್ರದಾಯದಂತೆ, ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಅಂತ್ಯಕ್ರಿಯೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್,…

Leave a Reply

Your email address will not be published. Required fields are marked *

You Missed

2025 ನೇ ಸಾಲಿನ ನೂತನ ಕ್ಯಾಲೆಂಡರ್ ಅನ್ನು ಸಮೃದ್ಧಿ ವಾರ್ತೆ ಪತ್ರಿಕೆ ಬಿಡುಗಡೆ…

2025 ನೇ ಸಾಲಿನ ನೂತನ ಕ್ಯಾಲೆಂಡರ್ ಅನ್ನು ಸಮೃದ್ಧಿ ವಾರ್ತೆ ಪತ್ರಿಕೆ ಬಿಡುಗಡೆ…

ಕೆ.ಆರ್.ನಗರದ ನಿವಾಸಿ, ಗೌರವ ಡಾಕ್ಟರೇಟ್‌ಗೆ ಭಾಜನ.

ಕೆ.ಆರ್.ನಗರದ  ನಿವಾಸಿ,  ಗೌರವ ಡಾಕ್ಟರೇಟ್‌ಗೆ ಭಾಜನ.

ನೂತನ ವರ್ಷಕ್ಕೆ ಯೋಗನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಎರಡು ಲಕ್ಷ ತಿರುಪತಿ ಮಾದರಿಯ ಲಡ್ಡು ವಿತರಣೆ.

ನೂತನ ವರ್ಷಕ್ಕೆ ಯೋಗನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಎರಡು ಲಕ್ಷ ತಿರುಪತಿ ಮಾದರಿಯ ಲಡ್ಡು ವಿತರಣೆ.

ಬೆಳ್ಳಂಬೆಳಗ್ಗೆ ಪುತ್ತೂರಿನ ಪರ್ಲಡ್ಕದಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾ*.

ಬೆಳ್ಳಂಬೆಳಗ್ಗೆ ಪುತ್ತೂರಿನ ಪರ್ಲಡ್ಕದಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾ*.

ನಿಗಮಬೋಧ್ ಘಾಟ್‌ನಲ್ಲಿ ಆರ್ಥಿಕ ಸುಧಾರಣೆಗಳ ಹರಿಕಾರ ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್​ ಅಂತ್ಯಕ್ರಿಯೆ.

ನಿಗಮಬೋಧ್ ಘಾಟ್‌ನಲ್ಲಿ ಆರ್ಥಿಕ ಸುಧಾರಣೆಗಳ ಹರಿಕಾರ ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್​ ಅಂತ್ಯಕ್ರಿಯೆ.

ಹೊಸ ವರ್ಷಾಚರಣೆ ಪ್ರಯುಕ್ತ ಬೆಂಗಳೂರಿನಲ್ಲಿ ಬಿಗಿ ಭದ್ರತೆ, 2 ಕೋಟಿ ರೂ. ಅಧಿಕ ಮೌಲ್ಯದ ಡ್ರಗ್ಸ್​​​​​ ಜಪ್ತಿ.

ಹೊಸ ವರ್ಷಾಚರಣೆ ಪ್ರಯುಕ್ತ ಬೆಂಗಳೂರಿನಲ್ಲಿ ಬಿಗಿ ಭದ್ರತೆ, 2 ಕೋಟಿ ರೂ. ಅಧಿಕ ಮೌಲ್ಯದ ಡ್ರಗ್ಸ್​​​​​ ಜಪ್ತಿ.