ರಾಯಚೂರು: ಅತ್ಯಾಚಾರಕ್ಕೆ ಮುಂದಾಗಿದ್ದ ಮಾವನನ್ನು ನಿರಾಕರಿಸಿದ್ದಕ್ಕೆ, ಸೊಸೆಯನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ರಾಯಚೂರಿನ ಜುಲಮಗೇರಾ ಗ್ರಾಮದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ದುಳ್ಳಮ್ಮ (27) ಎಂದು ಗುರುತಿಸಲಾಗಿದೆ. ಇದಕ್ಕೂ ಮುಂದೆ 2-3 ಬಾರಿ ಸೊಸೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಗ್ರಾಮದ ಹಿರಿಯರು, ಕುಟುಂಬಸ್ಥರು ಆರೋಪಿ ರಾಮಲಿಂಗಯ್ಯಗೆ ಬೈದು ಬುದ್ಧಿ ಹೇಳಿದ್ದರು. ಆದರೂ ಈ ಬಾರಿ ಮನೆಯಲ್ಲಿ ಯಾರು ಇಲ್ಲದ ವೇಳೆ ಸೊಸೆಯ ಮೇಲೆ ಅತ್ಯಾಚಾರ ಎಸಗಲು ಮುಂದಾಗಿದ್ದ. ಈ ವೇಳೆ ಸೊಸೆ ನಿರಾಕರಿಸಿದ್ದು, ಸಲಾಕೆಯಿಂದ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಘಟನೆ ಬಳಿಕ ಗ್ರಾಮದಿಂದ ಪರಾರಿಯಾಗಿದ್ದಾನೆ.
ಸದ್ಯ ಇಡಪನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್…
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣದಲ್ಲಿ ಬಿಜೆಪಿ ಎಂಎಲ್ಸಿ ಸಿ.ಟಿ ರವಿ ಅವರನ್ನು ಪೊಲೀಸರು ಇಂದು ಬೆಳಗಾವಿ ಜೆಎಂಎಫ್ಸಿ ಕೋರ್ಟ್ಗೆ ಹಾಜರುಪಡಿಸಿದರು. ಸಿ.ಟಿ ರವಿ ವಿರುದ್ಧದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಸ್ಪರ್ಶಾ ಡಿಸೋಜಾ ಅವರು, ಸಿ.ಟಿ.ರವಿ…