ಬೆಳ್ಳಂಬೆಳಗ್ಗೆ ಪುತ್ತೂರಿನ ಪರ್ಲಡ್ಕದಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾ*.

ದಕ್ಷಿಣ ಕನ್ನಡ : ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರಿನ ಪರ್ಲಡ್ಕದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ದುರಂತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರಾದವರನ್ನು ಸುಳ್ಯದ ಜಟ್ಟಿಪಳ್ಳ ನಿವಾಸಿಗಳು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ತಂದೆ – ಮಗ ಹಾಗೂ ಇನ್ನೋರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಇವರು ತಮ್ಮ ಆಲ್ಟೋ ಕಾರಿನಲ್ಲಿ ಗೊಂದೊಳ್ ಪೂಜೆಗೆ ಪುತ್ತೂರಿನ ಪುಣಚಕ್ಕೆ ಆಗಮಿಸಿದ್ದರು. ಹಿಂತಿರುಗುವ ವೇಳೆ ಮುಂಜಾನೆ 4.15ರ ವೇಳೆಗೆ ಕಾರು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ. ಅಣ್ಣು ನಾಯ್ಕ, ಅವರ ಪುತ್ರ ಚಿದಾನಂದ ಹಾಗೂ ನೆರೆಮನೆಯ ರಮೇಶ್ ನಾಯ್ಕ ಮೃತರಾಗಿದ್ದಾರೆ.
ಪುತ್ತೂರು ಸಂಚಾರಿ ಪೊಲೀಸ್​​ ಠಾಣೆಯ ಸಬ್​ಇನ್ಸ್​ಪೆಕ್ಟರ್​​ ಉದಯ ರವಿ ಹಾಗೂ ಎಫ್.ಎಸ್.ಐ. ಎಲ್ ತಂಡದ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Posts

ಭಾವೈಕ್ಯತೆ ಮೆರೆದ ಕರೀಂಸಾಬ್ : ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಅನ್ನಸಂತರ್ಪಣೆ.

ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳದಲ್ಲಿ ಮುಸ್ಲಿಂ ಮುಖಂಡ ಅಬ್ದುಲ್ ಕರೀಂ ಸಾಬ್ ತಮ್ಮ ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ ಅನ್ನ ಸಂತರ್ಪಣೆ ಮಾಡುವ ಮೂಲಕ ಭಾವೈಕ್ಯತೆ ಮೆರೆದಿದ್ದಾರೆ. ಕಳೆದ ಮೂರು ವರ್ಷಗಳಿಂದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ ಅನ್ನಸಂತರ್ಪಣೆ ಮಾಡುತ್ತಾ ಹಿಂದೂ…

ನನ್ನ ರಾಜೀನಾಮೆ ಪ್ರಶ್ನೆಯೇ ಇಲ್ಲ: ಪ್ರಿಯಾಂಕ್ ಖರ್ಗೆ ಬಿಜೆಪಿ ನಾಯಕರಿಗೆ ತಿರುಗೇಟು…

ಬೆಂಗಳೂರು: ಎಷ್ಟೇ ಚಿರಾಡಲಿ, ಬಟ್ಟೆ ಹರಿದುಕೊಳ್ಳಲಿ ನಾನು ರಾಜೀನಾಮೆ ನೀಡುವುದಿಲ್ಲ ಎಂದು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಬಿಜೆಪಿ ನಾಯಕರಿಗೆ ತಿರುಗೇಟು ಕೊಟ್ಟಿದ್ದಾರೆ. ಸಚಿನ್ ಪಂಚಾಳ್ (Sachin Panchal) ಆತ್ಮಹತ್ಯೆ ಪ್ರಕರಣದಲ್ಲಿ ತನಿಖೆ ನಡೆಸುವಂತೆ ಗೃಹ ಸಚಿವರಿಗೆ…

Leave a Reply

Your email address will not be published. Required fields are marked *

You Missed

ಭಾವೈಕ್ಯತೆ ಮೆರೆದ ಕರೀಂಸಾಬ್ : ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಅನ್ನಸಂತರ್ಪಣೆ.

ಭಾವೈಕ್ಯತೆ ಮೆರೆದ ಕರೀಂಸಾಬ್ : ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಅನ್ನಸಂತರ್ಪಣೆ.

ಮೈಸೂರಿನಲ್ಲಿ ಕೋಟಿಗೊಬ್ಬ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಭಾರತಿ ವಿಷ್ಣುವರ್ಧನ್ .

ಮೈಸೂರಿನಲ್ಲಿ ಕೋಟಿಗೊಬ್ಬ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಭಾರತಿ ವಿಷ್ಣುವರ್ಧನ್ .

ನನ್ನ ರಾಜೀನಾಮೆ ಪ್ರಶ್ನೆಯೇ ಇಲ್ಲ: ಪ್ರಿಯಾಂಕ್ ಖರ್ಗೆ ಬಿಜೆಪಿ ನಾಯಕರಿಗೆ ತಿರುಗೇಟು…

ನನ್ನ ರಾಜೀನಾಮೆ ಪ್ರಶ್ನೆಯೇ ಇಲ್ಲ: ಪ್ರಿಯಾಂಕ್ ಖರ್ಗೆ ಬಿಜೆಪಿ ನಾಯಕರಿಗೆ ತಿರುಗೇಟು…

2024 ಈ ವರ್ಷ ವೈರಲ್ ಆದ ಭಾರತದ ಸುದ್ದಿಗಳು ಯಾವುವು?

ಸಚಿವ ಪ್ರಿಯಾಂಕ್ ಖರ್ಗೆರ ಮೇಲೆ ಬಿಜೆಪಿಯವರು ಮಾಡಿರುವ ಆರೋಪ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ : ಗೃಹ ಸಚಿವ ಪರಮೇಶ್ವರ.

ಸಚಿವ ಪ್ರಿಯಾಂಕ್ ಖರ್ಗೆರ ಮೇಲೆ ಬಿಜೆಪಿಯವರು ಮಾಡಿರುವ ಆರೋಪ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ : ಗೃಹ ಸಚಿವ ಪರಮೇಶ್ವರ.

KPSC ಮರುಪರೀಕ್ಷೆ ಪ್ರಶ್ನೆ ಪತ್ರಿಕೆಯಲ್ಲಿ ಮತ್ತೆ ಯಡವಟ್ಟು…. ಕರ್ನಾಟಕ ಲೋಕ ಸೇವಾ ಆಯೋಗಕ್ಕೆ ಅಭ್ಯರ್ಥಿ ಪತ್ರ.

KPSC ಮರುಪರೀಕ್ಷೆ ಪ್ರಶ್ನೆ ಪತ್ರಿಕೆಯಲ್ಲಿ ಮತ್ತೆ ಯಡವಟ್ಟು…. ಕರ್ನಾಟಕ ಲೋಕ ಸೇವಾ ಆಯೋಗಕ್ಕೆ ಅಭ್ಯರ್ಥಿ ಪತ್ರ.