ಭಾರತ ಮತ್ತು ಆಸ್ಟ್ರೇಲಿಯಾ 3rd Test: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯವು ಶುರುವಾಗಿದೆ. ಬ್ರಿಸ್ಬೇನ್ನಲ್ಲಿ ನಡೆಯುತ್ತಿರುವ ಈ ಮ್ಯಾಚ್ನಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ಬೌಲಿಂಗ್ ಆಯ್ದುಕೊಂಡಿದೆ. ಅದರಂತೆ ಆಸ್ಟ್ರೇಲಿಯಾ ತಂಡ ಇನಿಂಗ್ಸ್ ಆರಂಭಿಸಿದೆ. ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿರಾಟ್ ಕೊಹ್ಲಿ ವಿಶೇಷ ದಾಖಲೆ ಬರೆದಿದ್ದಾರೆ.
ಬ್ರಿಸ್ಬೇನ್ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೂಲಕ ವಿರಾಟ್ ಕೊಹ್ಲಿ ವಿಶೇಷ ದಾಖಲೆ ಬರೆದಿದ್ದಾರೆ. ಗಾಬಾ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡರು.
ಅದರಂತೆ ಫೀಲ್ಡಿಂಗ್ಗಾಗಿ ಮೈದಾನಕ್ಕಿಳಿದ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ 100 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ವಿಶೇಷ ದಾಖಲೆ ಬರೆದರು. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ 2ನೇ ಆಟಗಾರ ಎನಿಸಿಕೊಂಡರು.
ಇದಕ್ಕೂ ಮುನ್ನ ಆಸ್ಟ್ರೇಲಿಯಾ ವಿರುದ್ಧ ನೂರು ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ವಿಶೇಷ ದಾಖಲೆ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿತ್ತು. ಮಾಸ್ಟರ್ ಬ್ಲಾಸ್ಟರ್ ಆಸೀಸ್ ವಿರುದ್ಧ 110 ಪಂದ್ಯಗಳನ್ನಾಡಿ ಈ ದಾಖಲೆ ನಿರ್ಮಿಸಿದ್ದಾರೆ.
ಇದೀಗ ಆಸ್ಟ್ರೇಲಿಯಾ ವಿರುದ್ಧ 100ನೇ ಪಂದ್ಯದಲ್ಲಿ ಕಣಕ್ಕಿಳಿದು, ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಕಿಂಗ್ ಕೊಹ್ಲಿ ಸರಿಗಟ್ಟಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ 2ನೇ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಅಂದಹಾಗೆ ಆಸ್ಟ್ರೇಲಿಯಾ ವಿರುದ್ಧ 110 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಸಚಿನ್ ತೆಂಡೂಲ್ಕರ್ 6,707 ರನ್ ಕಲೆಹಾಕಿದರೆ, 100* ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ 5,326 ರನ್ ಗಳಿಸಿದ್ದಾರೆ. ಇದೀಗ ಬ್ರಿಸ್ಬೇನ್ನಲ್ಲಿ 100ನೇ ಪಂದ್ಯವಾಡುತ್ತಿರುವ ಕಿಂಗ್ ಕೊಹ್ಲಿ ಕಡೆಯಿಂದ 100ರ ಇನಿಂಗ್ಸ್ ಅನ್ನು ನಿರೀಕ್ಷಿಸಬಹುದು.