ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಚಾಟಿಯಿಂದ ತಮಗೆ ಹೊಡೆದುಕೊಳ್ಳುವ ಮೂಲಕ ಹೆಣ್ಣುಮಕ್ಕಳ ಲೈಂಗಿಕ ದೌರ್ಜನ್ಯ ವಿರುದ್ಧ ಪ್ರತಿಭಟಿಸಿದರು. ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಅಣ್ಣಮಲೈ ಭೀಷ್ಮ ಶಪತ ಕೈಗೊಂಡಿದ್ದು. ಡಿಎಂಕೆ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ಚಪ್ಪಲಿ ಧರಿಸುವುದಿಲ್ಲ ಎಂದು ಶಪಥ ಮಾಡಿದ್ದಾರೆ.
ಇಂದು ಬೆಳಗ್ಗೆ ಅವರ ನಿವಾಸದ ಮುಂದೆ ಚಾಟಿಯಿಂದ ಹೊಡೆದುಕೊಂಡು ತಮಗೆ ತಾವೇ ನೋವು ಮಾಡಿಕೊಂಡಿದ್ದಾರೆ. ಅಣ್ಣಾ ಯೂನಿರ್ವಸಿಟಿಯಲ್ಲಿ ಓದುತ್ತಿದ್ದ ಇಂಜಿನಿಯರಿಂಗ್ ವಿಧ್ಯಾರ್ಥಿನಿಯ ಮೇಲೆ ಕಾಲೇಜು ಕ್ಯಾಂಪಸ್ನಲ್ಲಿ ಅತ್ಯಾಚಾರ ನಡೆದಿದೆ. ಇದರ ವಿರುದ್ಧ ವಿಧ್ಯಾರ್ಥಿನಿ ಪೊಲೀಸರಿಗೆ ದೂರನ್ನು ನೀಡಿದ್ದರು.
ಪೊಲೀಸರು ಜ್ಞಾನಶೇಖರನ್ ಎಂಬಾತನನ್ನು ಬಂಧಿಸಿದ್ದರು. ಈತ ಯುವತಿಯ ಖಾಸಗಿ ವಿಡೀಯೋ ಚಿತ್ರಿಕರಿಸಿಕೊಂಡು ಬ್ಲಾಕ್ಮೇಲ್ ಮಾಡಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದನು ಎಂಬ ಆರೋಪವಿದೆ. ಆರೋಪಿಯ ಮೇಲೆ 2011ರಲ್ಲಿಯೂ ಇದೇ ರೀತಿಯ ಪ್ರಕರಣ ದಾಖಲಾಗಿದ್ದು. ಈತನ ವಿರುದ್ದ ಸುಮಾರು 17 ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಆದರೂ ಈ ಆರೋಪಿ ಸ್ವತಂತ್ರ್ಯವಾಗಿ ಓಡಾಡುತ್ತಿದ್ದಾನೆ.
ಡಿಎಂಕೆ ಸರ್ಕಾರದ ಆಡಳಿತದಲ್ಲಿ ವಿದ್ಯಾರ್ಥಿನಿಯರಿಗೆ ಭದ್ರತೆ ಇಲ್ಲ ಎಂದು ಆರೋಪಿಸಿ ತಮಿಳುನಾಡು ಬಿಜೆಪಿ ಮತ್ತು ಎಐಎಡಿಎಂಕೆ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಜೊತೆಗೆ 48 ದಿನಗಳ ಸುದೀರ್ಘ ಉಪವಾಸ ಕೈಗೊಂಡಿರುವ ಅಣ್ಣಾಮಲೈ , ಆರು ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ .
ಬೆಳ್ಳಂಬೆಳಗ್ಗೆ ಪುತ್ತೂರಿನ ಪರ್ಲಡ್ಕದಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾ*.
ದಕ್ಷಿಣ ಕನ್ನಡ : ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರಿನ ಪರ್ಲಡ್ಕದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ದುರಂತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರಾದವರನ್ನು ಸುಳ್ಯದ ಜಟ್ಟಿಪಳ್ಳ ನಿವಾಸಿಗಳು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ತಂದೆ – ಮಗ ಹಾಗೂ…