ಲೈನ್‌ಮ್ಯಾನ್‌ ಹಿಂದೆಯೇ ದೊಣ್ಣೆ ಹಿಡಿದು: ವಿದ್ಯುತ್ ಕಂಬವನ್ನೇರಿ ಅವಾಜ್ ಹಾಕಿದ ಮಹಿಳೆ.

ಉತ್ತರ ಪ್ರದೇಶ :- ಅಚ್ಚರಿಯ ಪ್ರಕರಣಗಳಿಗೆ ಸಂಬಂಧಿಸಿದ ಕೆಲವೊಂದು ವಿಡಿಯೋ ತುಣುಕುಗಳು ಸೋಷಿಯಲ್ ಮೀಡಿಯಾದಲ್ಲಿ ಆಗಾಗ್ಗೆ ಕಾಣ ಸಿಗುತ್ತಿರುತ್ತವೆ. ಇಲ್ಲೊಂದು ಅಂತಹದ್ದೇ ವಿಡಿಯೋ ವೈರಲ್ ಆಗಿದ್ದು, ಮಹಿಳೆಯೊಬ್ಬರು ಕರೆಂಟ್ ಕಂಬವನ್ನೇರಿ ಲೈನ್ಮ್ಯಾನ್ಗೆ ಧಮ್ಕಿ ಹಾಕಿದ್ದಾರೆ. ಹೌದು ಕರೆಂಟ್ ಬಿಲ್ ಸರಿಯಾಗಿ ಪಾವತಿಸದ ಕಾರಣ ವಿದ್ಯುತ್ ಕಂಬವನ್ನೇರಿ ಲೈನ್ಮ್ಯಾನ್ ವಿದ್ಯುತ್ ಕಡಿತಗೊಳಿಸಲು ಮುಂದಾದ ಸಂದರ್ಭದಲ್ಲಿ ಆತನ ಹಿಂದೆಯೇ ದೊಣ್ಣೆ ಹಿಡಿದು ಕಂಬವನ್ನೇರಿದ ಮಹಿಳೆಯೊಬ್ಬರು ಅವಾಸ್ ಹಾಕಿ ಆತನನ್ನು ಕಂಬದಿಂದ ಕೆಳಗಿಳಿಸಿದ್ದಾರೆ. ಮಹಿಳೆಯ ಭಂಡ ಧೈರ್ಯವನ್ನು ಕಂಡು ನೆಟ್ಟಿಗರು ಬೆರಗಾಗಿದ್ದಾರೆ.

ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಈ ಅಚ್ಚರಿಯ ಪ್ರಕರಣ ನಡೆದಿದ್ದು, ಹಲವು ತಿಂಗಳುಗಳಿಂದ ವಿದ್ಯುತ್ ಬಿಲ್ ಪಾವತಿಸುತ್ತಿಲ್ಲ ಎಂಬ ಕಾರಣಕ್ಕೆ ಲೈನ್ಮ್ಯಾನ್ ಬಂದು ನೇರವಾಗಿ ಕರೆಂಟ್ ಕಂಬದಿಂದಲೇ ವಿದ್ಯುತ್ ಕಡಿತಗೊಳಿಸಲು ಮುಂದಾಗಿದ್ದಾನೆ. ಇದನ್ನು ಕಂಡಂತಹ ಮಹಿಳೆಯೊಬ್ಬರು ತಾನು ಕೂಡಾ ಕೈಯಲ್ಲೊಂದು ದೊಣ್ಣೆ ಹಿಡಿದು ಏಣಿಯ ಮೂಲಕ ಕಂಬವನ್ನೇರಿ ಕರೆಂಟ್ ತೆಗೆದ್ರೆ ಜಾಗ್ರತೆ ಎಂದು ಆತನಿಗೆ ಬೈದಿದ್ದಾರೆ. ಈ ಮಹಿಳೆಯ ಬೈಗುಳಕ್ಕೆ ಹೆದರಿದ ಲೈನ್ಮ್ಯಾನ್ ಕರೆಂಟ್ ಕಟ್ ಮಾಡದೆಯೇ ಕಂಬದಿಂದ ಇಳಿದು ಸೀದಾ ಹೋಗಿದ್ದಾನೆ.
Gharkakalesh ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಮಹಿಳೆಯೊಬ್ಬರು ಕೈಯಲ್ಲೊಂದು ದೊಣ್ಣೆ ಹಿಡಿದು ಕರೆಂಟ್ ಕಂಬವನ್ನೇರಿ ಲೈನ್ಮ್ಯಾನ್ಗೆ ಕರೆಂಟ್ ತೆಗೆದ್ರೆ ಜಾಗ್ರತೆ ಎಂದು ಧಮ್ಕಿ ಹಾಕುತ್ತಿರುವ ದೃಶ್ಯವನ್ನು ಕಾಣಬಹುದು.
ಡಿಸೆಂಬರ್ 31 ರಂದು ಹಂಚಿಕೊಳ್ಳಲಾದ ಈ ವಿಡಿಯೋ 62 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಈ ಮಹಿಳೆ ನಿಜಕ್ಕೂ ಗಟ್ಟಿಗಿತ್ತಿʼ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼಇಷ್ಟೆಲ್ಲಾ ಧಮ್ಕಿ ಹಾಕುವ ಬದಲು ಆಕೆಗೆ ಕರೆಂಟ್ ಬಿಲ್ ಪಾವತಿಸಬಹುದಿತ್ತಲ್ವಾʼ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ.

Related Posts

ಕುಡಿದ ಮತ್ತಿನಲ್ಲಿ ಪತಿಗೆ ಆ್ಯ*ಡ್ ಎರಚಿದ ಪತ್ನಿ; ನೊಂದ ಪತಿ ಪೊಲೀಸರಿಗೆ ದೂರು.

ಭೋಪಾಲ್ :- ಕುಡಿದ ಅಮಲಿನಲ್ಲಿ ಗಂಡ ಹೆಂಡತಿಗೆ ಹೊಡೆಯುವುದು, ಗಂಡ ದಿನವೂ ಕುಡಿದು ಬಂದು ಹೊಡೆಯುತ್ತಾನೆ ಎಂದು ಹೆಂಡತಿ ಪೊಲೀಸರಿಗೆ ದೂರು ನೀಡುವುದು ಸಾಮಾನ್ಯ. ಆದರೆ, ಇಲ್ಲೊಬ್ಬಳು ಮಹಿಳೆ ತಾನೇ ಕಂಠಪೂರ್ತಿ ಕುಡಿದು ಗಂಡನಿಗೆ ಇನ್ನಿಲ್ಲದಷ್ಟು ಹಿಂಸೆ ನೀಡಿದ್ದಾಳೆ. ಕುಡುಕಿ ಹೆಂಡತಿಯ…

ರಣವೀರ್ ಸಿಂಗ್ ಕನ್ನಡದಲ್ಲಿ ದೀಪಿಕಾಗೆ ಪ್ರಪೋಸ್ !

ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಅವರ ಪ್ರೇಮಕಥೆ, ವಿವಾಹ ಮತ್ತು ಮಗುವಿನ ಬಗ್ಗೆ ಈ ಸ್ಟೋರಿಯಲ್ಲಿ ಚರ್ಚೆ ಆಗುತ್ತಿದೆ. ರಣವೀರ್ ಅವರು ದೀಪಿಕಾಗೆ ಕನ್ನಡದಲ್ಲಿ ಪ್ರಪೋಸ್ ಮಾಡಿದ ವಿಡಿಯೋ ವೈರಲ್ ಆಗಿದೆ. ಅವರ ಪ್ರೀತಿಯ ಆರಂಭ, ಮದುವೆ ಮತ್ತು ಈಗ…

Leave a Reply

Your email address will not be published. Required fields are marked *

You Missed

ಕುಡಿದ ಮತ್ತಿನಲ್ಲಿ ಪತಿಗೆ ಆ್ಯ*ಡ್ ಎರಚಿದ ಪತ್ನಿ; ನೊಂದ ಪತಿ ಪೊಲೀಸರಿಗೆ ದೂರು.

ಕುಡಿದ ಮತ್ತಿನಲ್ಲಿ ಪತಿಗೆ ಆ್ಯ*ಡ್ ಎರಚಿದ ಪತ್ನಿ; ನೊಂದ ಪತಿ ಪೊಲೀಸರಿಗೆ ದೂರು.

ರಣವೀರ್ ಸಿಂಗ್ ಕನ್ನಡದಲ್ಲಿ ದೀಪಿಕಾಗೆ ಪ್ರಪೋಸ್ !

ರಣವೀರ್ ಸಿಂಗ್ ಕನ್ನಡದಲ್ಲಿ ದೀಪಿಕಾಗೆ  ಪ್ರಪೋಸ್ !

ಕೆಜಿಗಟ್ಟಲೇ ಬಂಗಾರ ಧರಿಸಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಭಕ್ತ!

ಕೆಜಿಗಟ್ಟಲೇ ಬಂಗಾರ ಧರಿಸಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಭಕ್ತ!

ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಪ್ರಾ* ಕಳೆದುಕೊಂಡ ಯುವಕ!

ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಪ್ರಾ* ಕಳೆದುಕೊಂಡ ಯುವಕ!

5 ಸಾವಿರ ರೂಪಾಯಿ ನೋಟಿನ ಬಗ್ಗೆ RBI ಹೇಳಿದ್ದಿಷ್ಟು !

5 ಸಾವಿರ ರೂಪಾಯಿ ನೋಟಿನ ಬಗ್ಗೆ RBI ಹೇಳಿದ್ದಿಷ್ಟು !

ಗರ್ಲ್ಸ್‌ ಹಾಸ್ಟೆಲ್‌ನಲ್ಲಿ ಹಿಡನ್‌ ಕ್ಯಾಮೆರಾ ; 300 ಕ್ಕೂ ಹೆಚ್ಚು ವಿಡಿಯೋ ಸೆರೆ ?

ಗರ್ಲ್ಸ್‌ ಹಾಸ್ಟೆಲ್‌ನಲ್ಲಿ ಹಿಡನ್‌ ಕ್ಯಾಮೆರಾ ; 300 ಕ್ಕೂ ಹೆಚ್ಚು ವಿಡಿಯೋ ಸೆರೆ ?