ಪ್ರಿಯತಮೆ ಆತ್ಮಹತ್ಯೆಗೆ ಶರಣಾದ ಹಿನ್ನಲೆ ಪ್ರಿಯತಮನೂ ನೇಣಿಗೆ ಶರಣಾದ ದುರಂತ ಘಟನೆ ಮೈಸೂರಿನಲ್ಲಿ ನಡೆದಿದೆ. ಮೋನಿಕಾ(20) ಹಾಗೂ ಮನು(22) ಮೃತ ಪ್ರೇಮಿಗಳು. ಹತ್ತಿರದ ಸಂಭಂಧಿಗಳಾಗಿದ್ದ ಮಂಡಕಳ್ಳಿ ಗ್ರಾಮದ ನಿವಾಸಿ ಮೋನಿಕಾ ಹಾಗೂ ಮೈಸೂರಿನ ಜ್ಯೋತಿನಗರದ ಮನು ಕಳೆದ 2 ವರ್ಷಗಳಿಂದ ಪ್ರೀತಿಸುತ್ತಿದ್ದರು. ಮನೆಯಲ್ಲಿ ಇಬ್ಬರಿಗೂ ಮದುವೆ ಮಾಡಲು ಕುಟುಂಬಸ್ಥರು ತೀರ್ಮಾನಿಸಿದ್ದರು.ಇತ್ತೀಚೆಗೆ ಪ್ರೇಮಿಗಳ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಭಿನ್ನಾಭಿಪ್ರಾಯ ಬಂದಿದೆ. ಇಬ್ಬರ ನಡುವೆ ಸಣ್ಣ ಗಲಾಟೆ ಆಗಿದೆ. ಇದರಿಂದ ಬೇಸತ್ತ ಮೋನಿಕಾ ದಟ್ಟಗಳ್ಳಿಯ ಕೆಲಸ ಮಾಡುತ್ತಿದ್ದ ಮನೆಯೊಂದರಲ್ಲಿ ನೇಣಿಗೆ ಶರಣಾಗಿದ್ದಾಳೆ. ವಿಷಯ ತಿಳಿದ ಮನು ಸ್ಥಳಕ್ಕೆ ಧಾವಿಸಿ ಮೋನಿಕಾಳನ್ನ ಆಸ್ಪತ್ರೆಗೆ ಕರೆತಂದಿದ್ದಾನೆ. ಆದ್ರೆ ಮೋನಿಕಾ ಮೃತಪಟ್ಟಿದ್ದಾಳೆ. ಮೋನಿಕಾ ಸಾವಿಗೆ ಮನನೊಂದ ಮನು ತಾನೂ ಸಹ ಜ್ಯೋತಿನಗರದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಸಾವಿನಲ್ಲೂ ಸಹ ಪ್ರೇಮಿಗಳು ಒಂದಾಗಿದ್ದಾರೆ….
ಅರ್ಜುನ್ ಗುರೂಜಿ ಹಾಗೂ ಶಿಷ್ಯಂದಿರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ : ಸ್ನೇಹಮಯಿ ಕೃಷ್ಣ ಹೆಸರಿನಲ್ಲಿ ದೂರು
ಅರ್ಜುನ್ ಗುರೂಜಿ ಹಾಗೂ ಅವರ ಶಿಷ್ಯಂದಿರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಹೆಸರಿನಲ್ಲಿ ದೂರು ನೀಡಲಾಗಿದೆ. ಮುಗ್ದ ಹೆಣ್ಣುಮಕ್ಕಳು, ಮಹಿಳೆಯರು, ವಿಧವೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಲಾಗಿದ್ದು, ನೊಂದ ಮಹಿಳೆಯರಿಗೆ ಸೂಕ್ತ ರಕ್ಷಣೆ…