ಹೊಸ ವರ್ಷದ ಸಂಭ್ರಮಾಚರಣೆಗೆ ಬಾರ್ಗೆ ಕಳ್ಳತನ ಮಾಡಲು ಹೋಗಿ ಕಂಠಪೂರ್ತಿ ಕುಡಿದು ಅಲ್ಲೇ ಮಲಗಿದ ಕಳ್ಳ

ತೆಲಂಗಾಣ :- ಹೊಸ ವರ್ಷದ ಸಂಭ್ರಮಾಚರಣೆಗೆ ದುಡಿಲ್ಲದೇ ಕಾರಣ ತೆಲಂಗಾಣ ವ್ಯಕ್ತಿಯೊಬ್ಬ ಮದ್ಯದ ಅಂಗಡಿಗೆ ನುಗ್ಗಿ ಮದ್ಯದ ಬಾಟಲಿಗಳನ್ನು ದೋಚಿದ್ದಾನೆ. ಕದ್ದ ಬಾಟಲಿಯೊಂದಿಗೆ ಬಾರ್ನಿಂದ ಹೊರಗಡೆ ಬರುವ ಮುನ್ನ ಅಲ್ಲಿದ್ದ ಒಂದಿಷ್ಟು ಮದ್ಯವನ್ನು ಕುಡಿದು ಮತ್ತೆ ಹೋಗುವ ಎಂದು ಪ್ಲಾನ್ ಮಾಡಿದ್ದಾನೆ. ಆದರೆ ಕಂಠಪೂರ್ತಿ ಕುಡಿದ ಕಳ್ಳ ಅಲ್ಲೇ ಮಲಗಿದ್ದು, ಮರುದಿನ ಬೆಳಿಗ್ಗೆ ಅಂಗಡಿಯ ಮಾಲೀಕನ ಕೈ ಸಿಕ್ಕಿಬಿದ್ದಿದ್ದಾನೆ. ತೆಲಂಗಾಣದ ಮೇದಕ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಭಾನುವಾರ ರಾತ್ರಿ ‘ಕನಕದುರ್ಗಾ ವೈನ್ಸ್’ ಹೆಸರಿನ ಅಂಗಡಿಗೆ ನುಗ್ಗಿ ಛಾವಣಿಯ ಕೆಲವು ಹೆಂಚುಗಳನ್ನು ಕಿತ್ತು ಸಿಸಿಟಿವಿ ಕ್ಯಾಮೆರಾ ನಿಷ್ಕ್ರಿಯಗೊಳಿಸಿ ದುಬಾರಿ ಬೆಲೆಯ ಮದ್ಯದ ಬಾಟಲಿಗಳನ್ನು ಕದ್ದಿದ್ದ ಕಳ್ಳ, ಇನ್ನೇನು ಅಂಗಡಿಯಿಂದ ಪಾರಾಗಬೇಕು ಎನ್ನುವಷ್ಟರಲ್ಲಿ ಚಳಿಗೆ ಸ್ಪಲ್ಪ ಕುಡಿದು ಮತ್ತೆ ಹೋಗುವ ಎಂದು ಯೋಚಿಸಿದ್ದಾನೆ. ಆದರೆ ಮದ್ಯದ ಆಸೆಗೆ ಕಂಠಪೂರ್ತಿ ಕುಡಿದಿದ್ದಾನೆ. ಸೋಮವಾರ ಮುಂಜಾನೆ ಅಂಗಡಿ ಮಾಲೀಕ ಅಂಗಡಿಯ ಬಾಗಿಲು ತೆಗೆದಾಗ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಅಪರಿಚಿತ ವ್ಯಕ್ತಿಯನ್ನು ಕಂಡು ಶಾಕ್ ಆಗಿದ್ದಾರೆ.

ಸೋಮವಾರ ಬೆಳಗ್ಗೆ ಪೊಲೀಸರು ಸ್ಥಳಕ್ಕೆ ಬಂದ ನಂತರ ಘಟನೆಯ ದೃಶ್ಯಗಳು ಆನ್ಲೈನ್ನಲ್ಲಿ ಕಾಣಿಸಿಕೊಂಡಿವೆ. ಕಳ್ಳ ಮದ್ಯದಂಗಡಿಯಲ್ಲಿ ನೆಲದ ಮೇಲೆ ಮಲಗಿದ್ದು ನಗದು ಮತ್ತು ಮದ್ಯದ ಬಾಟಲಿಗಳು ಅವನ ಸುತ್ತಲೂ ಬಿದ್ದಿರುವುದನ್ನು ತೋರಿಸುವ ಫೋಟೋ ವೈರಲ್ ಆಗಿದೆ.
ಈ ಕುರಿತು ಮಾಹಿತಿ ನೀಡಿದ ಸಬ್ ಇನ್ಸ್ಪೆಕ್ಟರ್ ಅಹ್ಮದ್ ಮೊಯಿನುದ್ದೀನ್ “ಕಳ್ಳನನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಂಧಿಸಲಾಗಿದೆ. ಆತನ್ನು ಆಂಬ್ಯುಲೆನ್ಸ್ನಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಸಲು ಅವನಿಗೆ ಪ್ರಜ್ಞೆ ಮರಳಲು ಪೊಲೀಸ್ ತಂಡ ಕಾಯುತ್ತಿದೆ ” ಎಂದು ಹೇಳಿದ್ದಾರೆ.

Related Posts

ಕುಡಿದ ಮತ್ತಿನಲ್ಲಿ ಪತಿಗೆ ಆ್ಯ*ಡ್ ಎರಚಿದ ಪತ್ನಿ; ನೊಂದ ಪತಿ ಪೊಲೀಸರಿಗೆ ದೂರು.

ಭೋಪಾಲ್ :- ಕುಡಿದ ಅಮಲಿನಲ್ಲಿ ಗಂಡ ಹೆಂಡತಿಗೆ ಹೊಡೆಯುವುದು, ಗಂಡ ದಿನವೂ ಕುಡಿದು ಬಂದು ಹೊಡೆಯುತ್ತಾನೆ ಎಂದು ಹೆಂಡತಿ ಪೊಲೀಸರಿಗೆ ದೂರು ನೀಡುವುದು ಸಾಮಾನ್ಯ. ಆದರೆ, ಇಲ್ಲೊಬ್ಬಳು ಮಹಿಳೆ ತಾನೇ ಕಂಠಪೂರ್ತಿ ಕುಡಿದು ಗಂಡನಿಗೆ ಇನ್ನಿಲ್ಲದಷ್ಟು ಹಿಂಸೆ ನೀಡಿದ್ದಾಳೆ. ಕುಡುಕಿ ಹೆಂಡತಿಯ…

ರಣವೀರ್ ಸಿಂಗ್ ಕನ್ನಡದಲ್ಲಿ ದೀಪಿಕಾಗೆ ಪ್ರಪೋಸ್ !

ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಅವರ ಪ್ರೇಮಕಥೆ, ವಿವಾಹ ಮತ್ತು ಮಗುವಿನ ಬಗ್ಗೆ ಈ ಸ್ಟೋರಿಯಲ್ಲಿ ಚರ್ಚೆ ಆಗುತ್ತಿದೆ. ರಣವೀರ್ ಅವರು ದೀಪಿಕಾಗೆ ಕನ್ನಡದಲ್ಲಿ ಪ್ರಪೋಸ್ ಮಾಡಿದ ವಿಡಿಯೋ ವೈರಲ್ ಆಗಿದೆ. ಅವರ ಪ್ರೀತಿಯ ಆರಂಭ, ಮದುವೆ ಮತ್ತು ಈಗ…

Leave a Reply

Your email address will not be published. Required fields are marked *

You Missed

ಕುಡಿದ ಮತ್ತಿನಲ್ಲಿ ಪತಿಗೆ ಆ್ಯ*ಡ್ ಎರಚಿದ ಪತ್ನಿ; ನೊಂದ ಪತಿ ಪೊಲೀಸರಿಗೆ ದೂರು.

ಕುಡಿದ ಮತ್ತಿನಲ್ಲಿ ಪತಿಗೆ ಆ್ಯ*ಡ್ ಎರಚಿದ ಪತ್ನಿ; ನೊಂದ ಪತಿ ಪೊಲೀಸರಿಗೆ ದೂರು.

ರಣವೀರ್ ಸಿಂಗ್ ಕನ್ನಡದಲ್ಲಿ ದೀಪಿಕಾಗೆ ಪ್ರಪೋಸ್ !

ರಣವೀರ್ ಸಿಂಗ್ ಕನ್ನಡದಲ್ಲಿ ದೀಪಿಕಾಗೆ  ಪ್ರಪೋಸ್ !

ಕೆಜಿಗಟ್ಟಲೇ ಬಂಗಾರ ಧರಿಸಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಭಕ್ತ!

ಕೆಜಿಗಟ್ಟಲೇ ಬಂಗಾರ ಧರಿಸಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಭಕ್ತ!

ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಪ್ರಾ* ಕಳೆದುಕೊಂಡ ಯುವಕ!

ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಪ್ರಾ* ಕಳೆದುಕೊಂಡ ಯುವಕ!

5 ಸಾವಿರ ರೂಪಾಯಿ ನೋಟಿನ ಬಗ್ಗೆ RBI ಹೇಳಿದ್ದಿಷ್ಟು !

5 ಸಾವಿರ ರೂಪಾಯಿ ನೋಟಿನ ಬಗ್ಗೆ RBI ಹೇಳಿದ್ದಿಷ್ಟು !

ಗರ್ಲ್ಸ್‌ ಹಾಸ್ಟೆಲ್‌ನಲ್ಲಿ ಹಿಡನ್‌ ಕ್ಯಾಮೆರಾ ; 300 ಕ್ಕೂ ಹೆಚ್ಚು ವಿಡಿಯೋ ಸೆರೆ ?

ಗರ್ಲ್ಸ್‌ ಹಾಸ್ಟೆಲ್‌ನಲ್ಲಿ ಹಿಡನ್‌ ಕ್ಯಾಮೆರಾ ; 300 ಕ್ಕೂ ಹೆಚ್ಚು ವಿಡಿಯೋ ಸೆರೆ ?