11 ವರ್ಷಗಳ ನಂತರ ದೇವಾಲಯದ ಬಾಗಿಲು ತೆರೆದು ಪೂಜೆ; ಜಾತಿ ಮರೆತು ಒಂದಾದ ಜನ….

ಮೈಸೂರು: ಜಾತಿ ಮರೆತು ಸಮುದಾಯಗಳು ಒಂದಾದ ಪರಿಣಾಮ 11 ವರ್ಷಗಳ ನಂತರ ದೇವಾಲಯದ ಬಾಗಿಲು ತೆರೆದು ಮಾರಮ್ಮನಿಗೆ ಶುಕ್ರವಾರ ಸಂಜೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಮೈಸೂರು ತಾಲೂಕಿನ ಜಯಪುರ ಹೋಬಳಿಯ ಮಾರ್ಬಳ್ಳಿ ಗ್ರಾಮದಲ್ಲಿ, ಮೈಸೂರು ತಾಲೂಕು ತಹಸೀಲ್ದಾರ್ ಮಹೇಶ್ ಕುಮಾರ್ ನೇತೃತ್ವದಲ್ಲಿ ಐವರು ಮುಖಂಡರೊಂದಿಗೆ ಯಶಸ್ವಿಯಾಗಿ ಶಾಂತಿಸಭೆ ನಡೆಸಲಾಯಿತು. ಬಳಿಕ ಗ್ರಾಮದಲ್ಲಿ 11 ವರ್ಷಗಳ ನಂತರ ಸಂತಸ ಮನೆ ಮಾಡಿದೆ.
ಈ ಮಾರಮ್ಮ ದೇವಾಲಯಕ್ಕೆ ಹಿಂದೆ ದಲಿತರ ಪ್ರವೇಶಕ್ಕೆ ನಿರ್ಬಂಧ ಹೇರಿದ ಹಿನ್ನೆಲೆಯಲ್ಲಿ ಭಾರಿ ವಿವಾದ ಉಂಟಾಗಿ, ಬಾಗಿಲು ಮುಚ್ಚಲಾಗಿತ್ತು

ಕಳೆದ 11ವರ್ಷದಿಂದ ಮಾರಮ್ಮನ ದೇವಾಲಯದಲ್ಲಿ ಯಾವುದೇ ಪೂಜೆ ಪುನಸ್ಕಾರಗಳು ನಡೆದಿರಲಿಲ್ಲ. ದೇವಾಲಯದ ಬಾಗಿಲು ತೆರೆಸಲು ಸಾಕಷ್ಟು ಬಾರಿ ಸಂಧಾನ ಸಭೆಗಳು ನಡೆದಿತ್ತು. ಆದರೂ ಗ್ರಾಮದಲ್ಲಿ ಒಮ್ಮತದ ತೀರ್ಮಾನಕ್ಕೆ ಬರಲು ಸಾಧ್ಯವಾಗಿರಲಿಲ್ಲ. ಇದೀಗ ತಹಸೀಲ್ದಾರ್ ಕಚೇರಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ತಹಸೀಲ್ದಾರ್ ಮಹೇಶ್ ಕುಮಾರ್ ನೇತೃತ್ವದಲ್ಲಿ ಶಾಂತಿ ಸಭೆ ಕರೆಯಲಾಗಿತ್ತು.
ಎಲ್ಲ ಕೋಮಿನ 5 ಮುಖಂಡರನ್ನು ಸಭೆಗೆ ಆಹ್ವಾನಿಸಲಾಗಿತ್ತು. ಸುಧೀರ್ಘ ಚರ್ಚೆ ನಂತರ ಮಾರಮ್ಮ ದೇವಾಲಯ ಬಾಗಿಲು ಮತ್ತೆ ತೆರೆಯುವ ನಿರ್ಧಾರಕ್ಕೆ ಬರಲಾಯಿತು. ಶುಕ್ರವಾರ ಸಂಜೆ ಎಲ್ಲಾ ಸಮುದಾಯದ ಮುಖಂಡರು ಹಾಗೂ ತಹಸೀಲ್ದಾರ್ ಸಮ್ಮುಖದಲ್ಲಿ ದೇವಾಲಯದ ಬೀಗ ತೆರೆದು ಒಳ ಪ್ರವೇಶಿಸಿ ಗ್ರಾಮದ ದೇವತೆಗೆ ವಿಶೇಷ ಪೂಜೆ ನೆರವೇರಿಸುವ ಮೂಲಕ ವಿವಾದಕ್ಕೆ ಅಂತ್ಯ ಹಾಡಲಾಗಿದೆ.

“11 ವರ್ಷಗಳ ಹಿಂದೆ ಮಾಚ್೯ ತಿಂಗಳಿನಲ್ಲಿ ಮಾರಮ್ಮನ ಹಬ್ಬ ಸಂಭ್ರಮದಿಂದ ನಡೆಯುತ್ತಿತ್ತು. ದೇವಾಲಯಕ್ಕೆ ದಲಿತರು ಬಂದು ಪೂಜೆ ಮಾಡಿಸಿದರು ಎಂಬ ಕಾರಣಕ್ಕೆ ಸವರ್ಣಿಯರು, ಹಬ್ಬದ ವೇಳೆ ದೇವಸ್ಥಾನದ ಬಾಗಿಲು ಮುಚ್ಚಿದ್ದರು. ಇದಾದ ಬಳಿ ಹಲವು ಬಾರಿ ಮನವಿ ಮಾಡಿದ್ದರೂ, ಪ್ರಯೋಜನವಾಗಿರಲಿಲ್ಲ. ಈಗ ತಹಶೀಲ್ದಾರ್ ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ದೇವಾಲಯ ಬಾಗಿಲು ತೆರೆದು ಪೂಜೆ ಸಲ್ಲಿಸಲಾಗಿದೆ” ಎಂದು ಅಲ್ಲಿನ ರೈತ ಮುಖಂಡ ದೂರವಾಣಿ ಮೂಲಕ ಮಾಹಿತಿ ನೀಡಿದ್ದಾರೆ.

Related Posts

ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್…

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣದಲ್ಲಿ ಬಿಜೆಪಿ ಎಂಎಲ್​ಸಿ ಸಿ.ಟಿ ರವಿ ಅವರನ್ನು ಪೊಲೀಸರು ಇಂದು ಬೆಳಗಾವಿ ಜೆಎಂಎಫ್​ಸಿ ಕೋರ್ಟ್​ಗೆ ಹಾಜರುಪಡಿಸಿದರು. ಸಿ.ಟಿ ರವಿ ವಿರುದ್ಧದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಸ್ಪರ್ಶಾ ಡಿಸೋಜಾ ಅವರು, ಸಿ.ಟಿ.ರವಿ…

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ..

87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಚಾಲನೆ ಸಕ್ಕರೆ ನಗರಿ ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಕರ್ನಾಟಕದಲ್ಲಿ ಅತಿ ಹೆಚ್ಚು…

Leave a Reply

Your email address will not be published. Required fields are marked *

You Missed

ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್…

ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್…

ಪಾರ್ಸೆಲ್ನಲ್ಲಿ ಇತ್ತು ಮಾನವನ ಶ*: ಬೆಚ್ಚಿಬಿದ್ದ ಮಹಿಳೆ!

ಪಾರ್ಸೆಲ್ನಲ್ಲಿ ಇತ್ತು ಮಾನವನ ಶ*: ಬೆಚ್ಚಿಬಿದ್ದ ಮಹಿಳೆ!

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ..

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ..

ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡೋದಿಲ್ಲ : ಸಿಎಂ ಸಿದ್ದರಾಮಯ್ಯ

ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡೋದಿಲ್ಲ : ಸಿಎಂ ಸಿದ್ದರಾಮಯ್ಯ

ಸಾರಿಗೆ ಇಲಾಖೆಯಿಂದ ವೈಟ್ ಬೋರ್ಡ್ ಟ್ರಾವೆಲ್ಸ್ ಮಾಲೀಕರಿಗೆ ಬಿಗ್ ಶಾಕ್.

ಸಾರಿಗೆ ಇಲಾಖೆಯಿಂದ ವೈಟ್ ಬೋರ್ಡ್ ಟ್ರಾವೆಲ್ಸ್ ಮಾಲೀಕರಿಗೆ ಬಿಗ್ ಶಾಕ್.

ಎಷ್ಟೇ ರೇಡ್ ಮಾಡಿದ್ರೂ ಅದೇ ರಾಗ ಅದೇ ಹಾಡು : ಪರಪ್ಪನ ಅಗ್ರಹಾರ ಜೈಲಿನಲ್ಲಿ‌ ಮತ್ತೆ ಮೊಬೈಲ್ ಸೌಂಡ್!

ಎಷ್ಟೇ ರೇಡ್ ಮಾಡಿದ್ರೂ ಅದೇ ರಾಗ ಅದೇ ಹಾಡು : ಪರಪ್ಪನ ಅಗ್ರಹಾರ ಜೈಲಿನಲ್ಲಿ‌ ಮತ್ತೆ ಮೊಬೈಲ್ ಸೌಂಡ್!