ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್
11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ಗೆ ಇಂದು ಹೈದರಾಬಾದ್‌ನಲ್ಲಿ ಚಾಲನೆ ಸಿಗಲಿದೆ. ಉದ್ಘಾಟನಾ ಪಂದ್ಯದಲ್ಲೇ ಬೆಂಗಳೂರು ಬುಲ್ಸ್ ಹಾಗೂ ತೆಲುಗು ಟೈಟಾನ್ಸ್ ತಂಡಗಳು ಕಾದಾಡಲಿವೆ. ದಿನದ 2ನೇ ಪಂದ್ಯದಲ್ಲಿ ದಬಾಂಗ್ ಡೆಲ್ಲಿ ತಂಡ ಯು ಮುಂಬಾ ವಿರುದ್ಧ ಸೆಣಸಾಡಲಿದೆ.
ಇನ್ನು ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಅನ್ನು ಮೂರು ನಗರಗಳಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಮೊದಲ ಸುತ್ತಿನ ಪಂದ್ಯಗಳು ಹೈದರಾಬಾದ್ನ ಗಚಿಬೌಲಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದರೆ, ದ್ವಿತೀಯ ಸುತ್ತಿನ ಪಂದ್ಯಗಳಿಗೆ ನೋಯ್ಡಾ ಒಳಾಂಗಣ ಕ್ರೀಡಾಂಗಣ ಆತಿಥ್ಯವಹಿಸಲಿದೆ. ಇನ್ನು ಮೂರನೇ ಹಂತದ ಪಂದ್ಯಗಳು ಪುಣೆಯ ಬಾಲೆವಾಡಿ ಬ್ಯಾಡ್ಮಿಂಟನ್ ಕ್ರೀಡಾಂಗಣದಲ್ಲಿ ನಡೆಯಲಿದೆ.