ನವದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್ನಲ್ಲಿ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಅನೌನ್ಸ್ ಮಾಡಲಾಯಿತು. ‘ಕಾಂತಾರ’ ಚಿತ್ರದಲ್ಲಿನ ಅತ್ಯದ್ಭುತ ಅಭಿನಯಕ್ಕಾಗಿ ಕನ್ನಡದ ಪ್ರತಿಭಾವಂತ ನಟ, ನಿರ್ದೇಶಕ ರಿಷಬ್ ಶೆಟ್ಟಿಗೆ ‘ಅತ್ಯುತ್ತಮ ನಟ’ ಪ್ರಶಸ್ತಿ ಲಭಿಸಿದೆ. ಇಡೀ ವಿಶ್ವದಾದ್ಯಂತ ಸದ್ದು ಮಾಡಿದ ‘ಕಾಂತಾರ’ ಸಿನಿಮಾ ‘ಅತ್ಯುತ್ತಮ ಮನರಂಜನಾ ಚಿತ್ರ’ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.
ಕೇಂದ್ರ ಸರ್ಕಾರದ ವಾರ್ತಾ, ಪ್ರಸಾರ ಇಲಾಖೆಯಿಂದ ರಾಷ್ಟ್ರೀಯ ಪ್ರಶಸ್ತಿ ಘೋಷಣೆಯಾಗಿದೆ. 2022ರ ಜನವರಿ 1 ರಿಂದ ಡಿಸೆಂಬರ್ 31ರವರೆಗೆ ಬಿಡುಗಡೆಯಾದ ಸಿನಿಮಾಗಳಿಗೆ ಇಂದು ಪ್ರಶಸ್ತಿ ಘೋಷಣೆ ಮಾಡಲಾಗಿದೆ.
ಕನ್ನಡದ ಕೆಜಿಎಫ್-2 ಚಿತ್ರಕ್ಕೆ ಎರಡು ಪ್ರಶಸ್ತಿ ಒಲಿದು ಬಂದಿದೆ. ಕೆಜಿಎಫ್-2 ಸಿನಿಮಾಗೆ ಕನ್ನಡದ ಅತ್ಯುತ್ತಮ ಚಿತ್ರ ಪ್ರಶಸ್ತಿ ಹಾಗೂ ಸಾಹಸ ವಿಭಾಗದಲ್ಲೂ ಕೆಜಿಎಫ್-2 ಚಿತ್ರಕ್ಕೆ ರಾಷ್ಟ್ರೀಯ ಮನ್ನಣೆ ಸಿಕ್ಕಿದೆ. ಕಾಂತಾರ ಸಿನಿಮಾದ ನಟನೆಗಾಗಿ ರಿಷಬ್ ಶೆಟ್ಟಿಗೆ ಅತ್ತುತ್ತಮ ನಟ ಪ್ರಶಸ್ತಿ ಘೋಷಣೆಯಾಗಿದೆ.
ಜನಮೆಚ್ಚುಗೆ ಗಳಿಸಿದ್ದ ಕಾಂತಾರ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಅಭಿನಯ ಅಮೋಘವಾಗಿತ್ತು. ಅತ್ಯುತ್ತಮ ನಟ ಜೊತೆಗೆ ಅತ್ಯುತ್ತಮ ಮನೋರಂಜನಾ ಪ್ರಶಸ್ತಿಗೆ ಕಾಂತಾರ ಸಿನಿಮಾ ಆಯ್ಕೆಯಾಗಿದೆ. ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ಸಿಕ್ಕಿದೆ.