ಮುಡಾ ಹಗರಣ ಪ್ರಕರಣ ತನಿಖೆಯನ್ನು ಜಾರಿ ನಿರ್ದೇಶನಾಲಯ(ಇಡಿ) ಚುರುಕುಗೊಳಿಸಿದ್ದು, ಸಂಬಂಧಿಸಿದ ಅಧಿಕಾರಿಗಳಿಗೆ ನೋಟಿಸ್ ನೀಡಿ ಮಹತ್ವದ ಮಾಹಿತಿ ಕಲೆಹಾಕಿದೆ. ಇದರ ನಡುವೆ ಇದೀಗ ಹಲವರ ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದೆ. ಸಿಎಂ ಆಪ್ತ ರಾಕೇಶ್ ಪಾಪಣ್ಣ ಮನೆ ಮೇಲೆ ಇಡಿ ದಾಳಿ ಮಾಡಿದೆ.
ಮುಡಾ 50:50 ಅನುಪಾತದಲ್ಲಿ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪ ಕೇಳಿಬಂದಿದ್ದು, ಈ ಪ್ರಕಟಣದಲ್ಲಿ ಇಡಿ ಅಧಿಕಾರಿಗಳು ಪ್ರವೇಶಿಸಿದೆ. ಈಗಾಗಲೇ ಹಲವರಿಗೆ ನೋಟಿಸ್ ನೀಡಿ ಮಹತ್ವದ ಮಾಹಿತಿ ಕಲೆ ಹಾಕುತ್ತಿದೆ. ಇದರ ನಡುವೆ, ಇಡಿ ಅಧಿಕಾರಿಗಳು ಮೈಸೂರಿನ ಹೀನಕಲ್ ಗ್ರಾಮದ ಸಿಎಂ ಆಪ್ತ ರಾಕೇಶ್ ಪಾಪಣ್ಣ ಮನೆ ಮೇಲೆ ದಾಳಿ ಮಾಡಿದೆ. ಇದರ ಬೆನ್ನಲ್ಲೇ ಇದೀಗ ಮುಡಾ ಮಾಜಿ ಆಯುಕ್ತ ನಟೇಶ್ ಮನೆ ಮೇಲೆ ಸಹ ಇಡಿ ದಾಳಿಯಾಗಿದ್ದು, ಇತ್ತ ಪ್ರಕರಣ ಎ1 ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಗೂ ಸಹ ಯಾವಾಗ ಇಡಿ ದಾಳಿ ಆಗುತ್ತೋ ಎನ್ನುವ ಆತಂಕದಲ್ಲಿದ್ದಾರೆ.