ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ
ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಅರಮನೆ ಕೋಟೆ ಆಂಜನೇಯಸ್ವಾಮಿ ದೇವಾಲಯ ಎದುರು ನಂದಿಧ್ವಜಕ್ಕೆ ಪೂಜೆ ನೆರವೇರಿದ ಬಳಿಕ ವಿಜಯದಶಮಿ ಮೆರವಣಿಗೆ ಆರಂಭಗೊಳ್ಳಲಿದೆ.
ಮಧ್ಯಾಹ್ನ 1:41 ರಿಂದ 2:10ರವರೆಗೆ ಮಕರ ಲಗ್ನದಲ್ಲಿ ಸಿಎಂ ಸಿದ್ದರಾಮಯ್ಯ ಪೂಜೆ ನೆರವೇರಿಸಲಿದ್ದಾರೆ. ಈ ಮೂಲಕ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ದೊರೆಯಲಿದೆ. ನಂದಿ ಧ್ವಜದ ಹಿಂದೆ ನಿಶಾನೆ ಆನೆ, ಇನ್ನುಳಿದ ಕಲಾತಂಡಗಳು, ಸ್ತಬ್ಧಚಿತ್ರಗಳ ಸಾಗಲಿವೆ.