ಚನ್ನಪಟ್ಟಣ ಉಪ ಚುನಾವಣೆ ಫಲಿತಾಂಶ ನಾನೂ ನೋಡ್ತೀನಿ. ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರು ಜಯಗಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. ಕೆರೆಗಳಿಗೆ ಜೀವದಾನ ಮಾಡಿದ ಯೋಗೀಶ್ವರ್ ಅಭಿವೃದ್ಧಿ ಪರವಾಗಿ ಇರುವುದರಿಂದಲೇ ಐದು ಬಾರಿ ಶಾಸಕರಾಗಿದ್ದು ಕಾಂಗ್ರೆಸ್ಸಿಗೆ ಮರಳಿದ್ದಾರೆ. ಇವರನ್ನು ನಾವೆಲ್ಲಾ ಸ್ವಾಗತಿಸಿದ್ದೇವೆ. ಸಿಪಿ ಯೋಗೇಶ್ವರ್ ಗೆಲ್ಲುವ ಮೂಲಕ ಚನ್ನಪಟ್ಟಣದಲ್ಲಿ ನಿಂತು ಹೋಗಿರುವ ಅಭಿವೃದ್ಧಿಗೆ ಮರು ಚಾಲನೆ ನೀಡಿ ಎಂದು ಕರೆ ನೀಡಿದರು.
ಕುಮಾರಸ್ವಾಮಿಗೆ ಚನ್ನಪಟ್ಟಣ ಮರೆತುಹೋಗಿ ಮಂಡ್ಯಕ್ಕೆ ಸೀಮಿತರಾಗಿದ್ದಾರೆ. ಬಿಜೆಪಿ ಒಕ್ಕೂಟದಿಂದ ಕುಮಾರಸ್ವಾಮಿಯೇ ನಿಲ್ಲಲಿ, ನಿಖಿಲ್ ಕುಮಾರಸ್ವಾಮಿಯೇ ನಿಲ್ಲಲಿ, ಶ್ರೀಮತಿ ಅನಿತಾ ಕುಮಾರಸ್ವಾಮಿಯವರೇ ನಿಲ್ಲಲಿ ಇಲ್ಲಿ ಕಾಂಗ್ರೆಸ್ ಪಕ್ಷದ ಸಿಪಿ ಯೋಗೇಶ್ವರ್ ಅವರೇ ಭರ್ಜರಿ ಜಯಗಳಿಸೋದು ಖಚಿತ ಎಂದು ಭರವಸೆ ವ್ಯಕ್ತಪಡಿಸಿದರು.