ಮೈಸೂರು ಮುಡಾ ಕಚೇರಿ ಮೇಲೆ ಇಡಿ ದಾಳಿ, 20ಕ್ಕೂ ಹೆಚ್ಚು ಅಧಿಕಾರಿಗಳಿ ದಾಳಿ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. 20ಕ್ಕೂ ಹೆಚ್ಚು ಅಧಿಕಾರಿಗಳಿ ದಾಳಿ ಮಾಡಿ, ಸೈಟ್ ಹಂಚಿಕೆ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
ಮುಡಾ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಿವೇಶನ ಹಂಚಿಕೆ ವಿಚಾರವಾಗಿ ಮುಡಾದಲ್ಲಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಆರ್ಐಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ನೀಡಿದ ದೂರಿನ ಆಧಾರದ ಮೇಲೆ ಇಡಿ ಅಧಿಕಾರಿಗಳು ಮುಡಾ ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಇಡಿಯ 20ಕ್ಕೂ ಹೆಚ್ಚು ಅಧಿಕಾರಿಗಳು ದಾಖಲೆ ಪರಿಶೀಲಿಸುತ್ತಿದ್ದಾರೆ.