ಹೆಲಿಕಾಪ್ಟರ್ನಲ್ಲಿ ಬಂದು ಮುಡಾ ಹಗರಣದ ಕಡತ ತೆಗೆದುಕೊಂಡು ಹೋಗಿದ್ದಾರೆ : ಭೈರತಿ ಸುರೇಶ್ ವಿರುದ್ಧ ಸ್ನೇಹಮಯಿ ಕೃಷ್ಣ ದೂರು
ಹೆಲಿಕಾಪ್ಟರ್ನಲ್ಲಿ ಬಂದು ಮುಡಾ ಹಗರಣದ ಕಡತಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಆರೋಪಿಸಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ವಿರುದ್ಧ ಸ್ನೇಹಮಯಿ ಕೃಷ್ಣ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ್ದಾರೆ.
ಮುಡಾ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದರೂ ಆ ದಾಖಲೆಗಳನ್ನು ವಶಕ್ಕೆ ಪಡೆಯದೇ ಸುಜೀತ್ ಅವರು ಸಚಿವರಿಗೆ ಮಾಹಿತಿ ನೀಡಿದ್ದಾರೆ. ಈ ಮಾಹಿತಿಯ ಮೇರೆ ಬೈರತಿ ಸುರೇಶ್ ಅವರು ಹೆಲಿಕಾಪ್ಟರ್ನಲ್ಲಿ ಬಂದು ಕಡತಗಳನ್ನ ತೆಗೆದುಕೊಂಡು ಹೋಗಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಸ್ನೇಹಮಯಿ ಕೃಷ್ಣ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.