ನಾನು ಕೂಡ ಸಿಎಂ ಸ್ಥಾನದ ಆಕಾಂಕ್ಷಿ : ಬಸವರಾಜ ರಾಯರೆಡ್ಡಿ
ಸುದ್ದಿಗಾರರೊಂದಿಗೆ ಮಾತನಾಡಿ ರಾಯರೆಡ್ಡಿ ನಾನೂ ಲಿಂಗಾಯತ ಸಮುದಾಯಕ್ಕೆ ಸೇರಿದ್ದೇನೆ. ಲಿಂಗಾಯತ ನಾಯಕರಲ್ಲಿ ತುಂಬಾ ಹಿರಿಯನಾಗಿದ್ದೇನೆ. ಕಲ್ಯಾಣ ಕರ್ನಾಟಕದಲ್ಲಿ ಅನೇಕ ಬಾರಿ ಆಯ್ಕೆ ಆಗಿರುವ ಶಾಸಕನಾಗಿದ್ದು, ಲಿಂಗಾಯತ ಸಮುದಾಯಕ್ಕೆ ಅವಕಾಶ ಕೊಡುವುದಾದರೆ ನನಗೆ ಕೊಡಲಿ. ಹುದ್ದೆಗೆ ಆಸೆ ಪಡುವುದರಲ್ಲಿ ತಪ್ಪಿಲ್ಲ. ಆದರೆ, ಯಾರು ಸಿಎಂ ಆಗಬೇಕು ಎಂಬುದನ್ನು ವರಿಷ್ಠರು, ಶಾಸಕರು ತೀರ್ಮಾನ ಮಾಡಬೇಕು.
ಯಾರು ಬೇಕಾದರೂ ಈ ರಾಜ್ಯದ ಸಿಎಂ ಆಗಬಹುದು. ಅದರಂತೆ ನಾನು ಕೂಡ ಸಿಎಂ ಸ್ಥಾನದ ಆಕಾಂಕ್ಷಿ. ಆದರೆ, ಸಿಎಂ ಸಿದ್ದರಾಮಯ್ಯ ಅವರ ಆಶೀರ್ವಾದ ಬೇಕು ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಮಾರ್ಮಿಕವಾಗಿ ಹೇಳಿದ್ದಾರೆ.