ಯಾವ ನಾಲಗೆಯಲ್ಲಿ ನನ್ನ ರಾಜೀನಾಮೆ ಕೇಳುತ್ತಿದ್ದೀರಿ? : ಆರ್.​ ಅಶೋಕ್​ಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

“ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾಗ BS Yediyurappa ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರಲಿಲ್ಲವೇ? ಈಗ ಸಿದ್ದರಾಮಯ್ಯನವರು ಯಾಕೆ ರಾಜೀನಾಮೆ ನೀಡುತ್ತಿಲ್ಲ?’’ ಎಂದು ವಿರೋಧಪಕ್ಷದ ನಾಯಕರಾದ ಆರ್.ಅಶೋಕ್ ಅವರು ಮತ್ತೊಮ್ಮೆ ತಮ್ಮ ಅಜ್ಞಾನವನ್ನು ಪ್ರದರ್ಶಿಸಿದ್ದಾರೆ. R Ashoka ಅವರೇ, ಈ ರೀತಿ ಬೇಕಾಬಿಟ್ಟಿ ಹೇಳಿಕೆ ನೀಡುವ ಮೊದಲು ವಾಸ್ತವಾಂಶವನ್ನು ಪರಿಶೀಲಿಸಿಕೊಂಡು ಮಾತನಾಡಿ.

ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ರಾಚೇನಹಳ್ಳಿ ಡಿನೋಟಿಫಿಕೇಷನ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು 2011ರ ಜನವರಿ 21ರಂದು. ಅವರ ವಿರುದ್ಧ ಅರ್ಜಿದಾರರು ನೀಡಿದ್ದ 1600 ಪುಟಗಳ ಪ್ರಬಲ ದಾಖಲೆಗಳ ಸಾಕ್ಷ ಕೂಡಾ ಇತ್ತು. ಹಾಗಿದ್ದರೂ ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರಲಿಲ್ಲ. ಅಶೋಕ್ ಅವರೇ, ಆ ಕಾಲದಲ್ಲಿ ನೀವೇ ಅಲ್ಲವೇ ಯಡಿಯೂರಪ್ಪನವರು ರಾಜೀನಾಮೆ ಯಾಕೆ ನೀಡಬೇಕು ಎಂದು ಪ್ರಶ್ನಿಸಿದ್ದವರು. ಈಗ ಯಾವ ನಾಲಗೆಯಲ್ಲಿ ನನ್ನ ರಾಜೀನಾಮೆ ಕೇಳುತ್ತಿದ್ದೀರಿ?

ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು 2011ರ ಆಗಸ್ಟ್ ನಾಲ್ಕರಂದು. ಅದು ನ್ಯಾ.ಸಂತೋಷ್ ಹೆಗ್ಡೆ ಅವರ ನೇತೃತ್ವದ ಲೋಕಾಯುಕ್ತವು ಅಕ್ರಮ ಗಣಿಗಾರಿಕೆಯ ತನಿಖಾ ವರದಿಯನ್ನು ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರಿಗೆ ಸಲ್ಲಿಸಿದ ನಂತರ. ಅಕ್ರಮ ಗಣಿಗಾರಿಕೆಯಿಂದಾಗಿ ರಾಜ್ಯದ ಬೊಕ್ಕಸಕ್ಕೆ 16,500 ಕೋಟಿ ರೂಪಾಯಿಯಷ್ಟು ನಷ್ಟವಾಗಿದೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಹೇಳಿತ್ತು.

ಅಶೋಕ್ ಅವರೇ, ಹಳೆಯದ್ದನ್ನೆಲ್ಲವನ್ನೂ ನೆನಪಿಸಿಕೊಳ್ಳಿ, ಆಗ ನೀವೆಲ್ಲರೂ ಸೇರಿ ಯಡಿಯೂರಪ್ಪ ವಿರುದ್ಧವೇ ಏನೆಲ್ಲ ಕುತಂತ್ರ ಮಾಡಿದ್ದೀರಿ ಎನ್ನುವುದೂ ನೆನಪಾಗಬಹುದು.

ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದ ರಾಚೇನಹಳ್ಳಿ ಡಿನೋಟಿಫಿಕೇಷನ್ ಹಗರಣದ ತನಿಖೆ ನಡೆಸಿದ್ದ ನ್ಯಾ.ಸಂತೋಷ್ ಹೆಗ್ಡೆ ನೇತೃತ್ವದ ಲೋಕಾಯುಕ್ತವೇ ಆರೋಪಗಳೆಲ್ಲವನ್ನು ಸಾಬೀತುಪಡಿಸಿ ಆರೋಪ ಪಟ್ಟಿ ಸಲ್ಲಿಸಿದ್ದರು. ಈ ಮೂಲಕ ರಾಜ್ಯಪಾಲರ ಪ್ರಾಸಿಕ್ಯೂಷನ್ ನಿರ್ಧಾರ ನ್ಯಾಯಯುತವಾಗಿತ್ತು ಎಂದು ಲೋಕಾಯುಕ್ತ ಸಂತೋಷ್ ಹೆಗ್ಡೆ ಅವರೇ ದೃಡೀಕರಿಸಿದ್ದರಲ್ಲವೇ? ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಒಂದಲ್ಲ ಎರಡಲ್ಲ ಹದಿನೈದು ಡಿನೋಟಿಫಿಕೇಷನ್ ಹಗರಣಗಳ ತನಿಖೆಗೆ ಅನುಮತಿ ನೀಡಿದ್ದರು. ಹೆಚ್ಚಿನ ಮಾಹಿತಿಗೆ ನ್ಯಾ.ಸಂತೋಷ್ ಹೆಗ್ಡೆ ಅವರು ನೀಡಿದ್ದ ಅಕ್ರಮ ಗಣಿಗಾರಿಕೆಯ ತನಿಖಾ ವರದಿಯನ್ನು ತೆಗೆದು ಓದಿಕೊಳ್ಳಿ.

ಇಂದು ರಾಜ್ಯಪಾಲ ಥಾವರಚಂದ್ ಗೆಹ್ಲೋತ್ ಪರವಾಗಿ ಕಣ್ಣೀರು ಸುರಿಸುತ್ತಿರುವ ಬಿಜೆಪಿ ನಾಯಕರಿಗೆ 2011ರಲ್ಲಿ ಆಗಿನ ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರ ಬಗ್ಗೆ ಅವಹೇಳನ ಮಾಡಿದ್ದೆಲ್ಲ ಮರೆತುಹೋದಂತಿದೆ. ನಮ್ಮ ಪಕ್ಷದ ಕಾರ್ಯಕರ್ತರು ಶಾಂತಿಯುತವಾಗಿ ನಡೆಸಿರುವ ಪ್ರತಿಭಟನೆಯನ್ನು ಪ್ರಶ್ನಿಸುತ್ತಿರುವ BJP Karnataka ನಾಯಕರಿಗೆ 2011ರಲ್ಲಿ ರಾಜ್ಯಪಾಲರ ನಡೆಯನ್ನು ವಿರೋಧಿಸಿ ಕರ್ನಾಟಕ ಬಂದ್ ಗೆ ಕರೆ ನೀಡಿದ್ದೂ ಕೂಡಾ ಮರೆತುಹೋಗಿದೆ.

Related Posts

ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್…

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣದಲ್ಲಿ ಬಿಜೆಪಿ ಎಂಎಲ್​ಸಿ ಸಿ.ಟಿ ರವಿ ಅವರನ್ನು ಪೊಲೀಸರು ಇಂದು ಬೆಳಗಾವಿ ಜೆಎಂಎಫ್​ಸಿ ಕೋರ್ಟ್​ಗೆ ಹಾಜರುಪಡಿಸಿದರು. ಸಿ.ಟಿ ರವಿ ವಿರುದ್ಧದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಸ್ಪರ್ಶಾ ಡಿಸೋಜಾ ಅವರು, ಸಿ.ಟಿ.ರವಿ…

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ..

87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಚಾಲನೆ ಸಕ್ಕರೆ ನಗರಿ ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಕರ್ನಾಟಕದಲ್ಲಿ ಅತಿ ಹೆಚ್ಚು…

Leave a Reply

Your email address will not be published. Required fields are marked *

You Missed

ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್…

ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್…

ಪಾರ್ಸೆಲ್ನಲ್ಲಿ ಇತ್ತು ಮಾನವನ ಶ*: ಬೆಚ್ಚಿಬಿದ್ದ ಮಹಿಳೆ!

ಪಾರ್ಸೆಲ್ನಲ್ಲಿ ಇತ್ತು ಮಾನವನ ಶ*: ಬೆಚ್ಚಿಬಿದ್ದ ಮಹಿಳೆ!

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ..

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ..

ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡೋದಿಲ್ಲ : ಸಿಎಂ ಸಿದ್ದರಾಮಯ್ಯ

ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡೋದಿಲ್ಲ : ಸಿಎಂ ಸಿದ್ದರಾಮಯ್ಯ

ಸಾರಿಗೆ ಇಲಾಖೆಯಿಂದ ವೈಟ್ ಬೋರ್ಡ್ ಟ್ರಾವೆಲ್ಸ್ ಮಾಲೀಕರಿಗೆ ಬಿಗ್ ಶಾಕ್.

ಸಾರಿಗೆ ಇಲಾಖೆಯಿಂದ ವೈಟ್ ಬೋರ್ಡ್ ಟ್ರಾವೆಲ್ಸ್ ಮಾಲೀಕರಿಗೆ ಬಿಗ್ ಶಾಕ್.

ಎಷ್ಟೇ ರೇಡ್ ಮಾಡಿದ್ರೂ ಅದೇ ರಾಗ ಅದೇ ಹಾಡು : ಪರಪ್ಪನ ಅಗ್ರಹಾರ ಜೈಲಿನಲ್ಲಿ‌ ಮತ್ತೆ ಮೊಬೈಲ್ ಸೌಂಡ್!

ಎಷ್ಟೇ ರೇಡ್ ಮಾಡಿದ್ರೂ ಅದೇ ರಾಗ ಅದೇ ಹಾಡು : ಪರಪ್ಪನ ಅಗ್ರಹಾರ ಜೈಲಿನಲ್ಲಿ‌ ಮತ್ತೆ ಮೊಬೈಲ್ ಸೌಂಡ್!