ನಾಳೆ ಬೆಂಗಳೂರಿನಲ್ಲಿ ಭಾರತ VS ನ್ಯೂಜಿಲೆಂಡ್ ಟೆಸ್ಟ್ ಸರಣಿ
ನ್ಯೂಜಿಲೆಂಡ್ ವಿರುದ್ಧ 3 ಪಂದ್ಯಗಳ ಟೆಸ್ಟ್ ಸರಣಿಗೆ 15 ಸದಸ್ಯರ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಎಂದಿನಂತೆ ಟೆಸ್ಟ್ ತಂಡವನ್ನು ರೋಹಿತ್ ಶರ್ಮಾ ಅವರು ಮುನ್ನಡೆಸಲಿದ್ದು, ಜಸ್ಪ್ರಿತ್ ಬೂಮ್ರಾ ಅವರು ಭಾರತ ಕ್ರಿಕೆಟ್ ತಂಡದ ಉಪನಾಯಕ ಆಗಿದ್ದಾರೆ.ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ, ವಿಕೆಟ್ಕೀಪರ್ ರಿಷಬ್ ಪಂತ್ ಮತ್ತು ಕೆ.ಎಲ್ ರಾಹುಲ್ ತಂಡದಲ್ಲಿದ್ದಾರೆ.
ನಾಳೆ ಬೆಂಗಳೂರಿನಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯವನ್ನು ಆಡಲಿದೆ. ಎರಡನೇ ಟೆಸ್ಟ್ ಪಂದ್ಯ ಅಕ್ಟೋಬರ್ 24 ರಿಂದ 28 ರವರೆಗೆ ಪುಣೆಯಲ್ಲಿ ನಡೆಯಲಿದೆ. ಸರಣಿಯ ಮೂರನೇ ಮತ್ತು ಅಂತಿಮ ಟೆಸ್ಟ್ ನವೆಂಬರ್ 1 ರಿಂದ ನವೆಂಬರ್ 5 ರವರೆಗೆ ಮುಂಬೈನಲ್ಲಿ ನಡೆಯಲಿದೆ.
ರೋಹಿತ್ ಶರ್ಮಾ (ಕ್ಯಾಪ್ಟನ್), ಜಸ್ಪ್ರಿತ್ ಬೂಮ್ರಾ (ವಿಸಿ), ಯಶ್ವಸಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆ.ಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಬ್ ಪಂತ್ (ವಿಕೆಟ್ ಕೀಪರ್), ಧೃವ್ ಜುರೆಲ್, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್.