ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ-20 ಸರಣಿಯ ಮೊದಲ T20 ಪಂದ್ಯ ಡರ್ಬನ್ನಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಭಾರತ 61 ರನ್ಗಳಿಂದ ಸೋಲಿಸಿದೆ. ಟೀಂ ಇಂಡಿಯಾ ಮೊದಲು ಬ್ಯಾಟ್ ಮಾಡಿ 202 ರನ್ ಗಳಿಸಿತ್ತು. ಈ ಗುರಿಯನ್ನು ಬೆನ್ನು ಹತ್ತಿದ್ದ ಆತಿಥೇಯ ದಕ್ಷಿಣ ಆಫ್ರಿಕಾ, 141 ರನ್ಗಳಿಗೆ ಆಲೌಟ್ ಆಗಿದೆ.
ಸಂಜು ಸ್ಯಾಮ್ಸನ್ ಭರ್ಜರಿ ಶತಕ, ರವಿ ಬಿಷ್ಣೋಯ್ ಮತ್ತು ವರುಣ್ ಚಕ್ರವರ್ತಿ ಅವರ ಮಾರಕ ಬೌಲಿಂಗ್ ದಾಳಿ ಭಾರತದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿತು. ಸ್ಯಾಮ್ಸನ್ 107 ರನ್ ಗಳಿಸಿದರೆ, ಬಿಷ್ಣೋಯ್ ಮತ್ತು ಚಕ್ರವರ್ತಿ ತಲಾ 3 ವಿಕೆಟ್ ಕಬಳಿಸಿದರು. ಸಂಜು ಸ್ಯಾಮ್ಸನ್ ಟಿ20 ಪಂದ್ಯದಲ್ಲಿ ಸತತ ಎರಡನೇ ಶತಕ ಬಾರಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. 50 ಎಸೆತಗಳಲ್ಲಿ 7 ಬೌಂಡರಿ ಹಾಗೂ 10 ಸಿಕ್ಸರ್ಗಳ ನೆರವಿನಿಂದ 107 ರನ್ ಗಳಿಸಿದರು.