ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಕೆ. ಮರಿಗೌಡ ರಾಜೀನಾಮೆ
ಮುಡಾ ಪ್ರಕರಣದಿಂದ ಸಿಎಂ ಸಿದ್ದರಾಮಯ್ಯ ವಿರುದ್ಧವೇ ಗಂಭೀರ ಆರೋಪ ಕೇಳಿ ಬಂದಿರುವ ಹಿನ್ನೆಲೆ ಕಾಂಗ್ರೆಸ್ ಪಕ್ಷ ತೀವ್ರ ಮುಜುಗರಕ್ಕೆ ಸಿಲುಕಿದೆ. ವಿರೋಧ ಪಕ್ಷಗಳು ಸಿಎಂ ಸಿದ್ದರಾಮಯ್ಯ ರಾಜೀನಾಮಗೆ ಆಗ್ರಹಿಸುತ್ತಲೇ ಇದ್ದಾರೆ. ಈ ಮಧ್ಯೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಕೆ.ಮರಿಗೌಡ ರಾಜೀನಾಮೆ ನೀಡಿದ್ದಾರೆ. ಸಿಎಂ ಸೂಚನೆ ಹಿನ್ನೆಲೆ ವಿಕಾಸಸೌಧದಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್ಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಮುಡಾ ಅಧ್ಯಕ್ಷ ಕೆ.ಮರಿಗೌಡ ಭೇಟಿ ಮಾಡಿದ್ದರು. ಆ ಮೂಲಕ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ರಾಜೀನಾಮೆ ಕೋಡುವುದು ಖಚಿತ ಎನ್ನಲಾಗಿತ್ತು. ಕೆಲ ಕಾಲ ಸಿದ್ದರಾಮಯ್ಯ ಜೊತೆ ಮಾತನಾಡಿರುವ ಮರಿಗೌಡ, ಬಳಿಕ ಸಿಎಂ ಸೂಚಿನೆ ಮೇರೆಗೆ ರಾಜೀನಾಮೆ ನೀಡಿದ್ದಾರೆ.