ಪ್ರಿಯಾಂಕಾ ಗಾಂಧಿ ಅವರು ಅತ್ಯಂತ ಬಹುಮತದಿಂದ ಈ ಕ್ಷೇತ್ರದಲ್ಲಿ ಜಯಗಳಿಸುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನಮ್ಮ ವಿರೋಧಿ, ಬಿಜೆಪಿ ಸೋಲಿಸಲು ಎಲ್ಲಾ ಜಾತ್ಯತೀತ ಶಕ್ತಿ ಮತ್ತು ಮೌಲ್ಯಗಳೊಂದಿಗೆ ನಾವು ಜೊತೆ ಸೇರುತ್ತೇವೆ. ಬಿಜೆಪಿ ಸೋಲಿಸಿ ದೇಶ ಉಳಿಸುವುದು ನಮ್ಮ ಮೊದಲ ಗುರಿ ಎಂದರು.
ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾಗಿರುವ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಅವರ ಸ್ಫರ್ಧೆಯ ಪರಿಣಾಮ ಏನಾಗಿರಬಹುದು ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಪ್ರಿಯಾಂಕಾ ಗಾಂಧಿ ಅವರು ಅತ್ಯಂತ ಬಹುಮತದಿಂದ ಈ ಕ್ಷೇತ್ರದಲ್ಲಿ ಜಯಗಳಿಸುವುದು ಶತಸಿದ್ಧ ಎಂದರು.