ಚಾಮರಾಜನಗರ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ತಂದುಕೊಟ್ಟ ಚಾಮರಾಜನಗರ ಕ್ಷೇತ್ರದ ಮತದಾರರಿಗೆ ಆಯೋಜಿಸಿದ್ದ ಕೃತಜ್ಞತಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಬಜೆಟ್ ನಲ್ಲಿ ಘೋಷಿಸಿರುವ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆ ಇಲ್ಲ. ನಮ್ಮ ಗ್ಯಾರಂಟಿ ಯೋಜನೆಗಳು ನಮ್ಮ ಸರ್ಕಾರ ಇರುವವರೆಗೂ ಜಾರಿಯಲ್ಲಿರುತ್ತವೆ. ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದರು.
ನಾವು ನುಡಿದಂತೆ ನಡೆಯದಿದ್ದರೆ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಒಂದು ಲಕ್ಷ 80 ಸಾವಿರ ಮತಗಳ ಅಂತರದಲ್ಲಿ ಕಾಂಗ್ರೆಸ್ ಗೆಲ್ಲಲು ಸಾಧ್ಯವಾಗುತ್ತಿರಲಿಲ್ಲ ಎಂದರು. ಬಿಜೆಪಿಯವರು ದೇಶದ ಮತದಾರರನ್ನು ದಡ್ಡರು ಎಂದು ಬಿಂಬಿಸುತ್ತಿದ್ದಾರೆ. ಆದರೆ ನಮ್ಮ ಮತದಾರರು ದಡ್ಡರಲ್ಲ ಎಂದರು.
ರಾಜ್ಯಕ್ಕೆ ಬರಗಾಲ ಬಂದರೂ ಕೇಂದ್ರ ಸರ್ಕಾರ ನಮ್ಮ ರಾಜ್ಯದ ಪಾಲಿನ ಹಣ ಕೊಡಲಿಲ್ಲ. ನಾವು ಕಾನೂನು ಹೋರಾಟ ಶುರು ಮಾಡಿದೆವು. ಸುಪ್ರೀಂಕೋರ್ಟ್ ಛೀಮಾರಿ ಹಾಕಿದ ಬಳಿಕ ಕೇಂದ್ರ ಸರ್ಕಾರ ರಾಜ್ಯದ ಪಾಲಿನ ಸ್ವಲ್ಪ ಹಣ ಬಿಡುಗಡೆ ಮಾಡಿತು. ಹೀಗಾಗಿ ಕೇಂದ್ರದಲ್ಲಿ ರಾಜ್ಯದ ಪರವಾಗಿ ಹೋರಾಟ ಮುಂದುವರೆಸಲು ಎಲ್ಲಾ 28 ಮಂದಿ ಸಂಸದರಿಗೆ ಸೂಚನೆ ನೀಡಿದ್ದೇವೆ ಎಂದರು.