ರಾಜಕೀಯ ಅಖಾಡದಲ್ಲಿ ಗೆದ್ದು ಬೀಗಿದ ಮಾಜಿ ಕುಸ್ತಿಪಟು ವಿನೇಶ್ ಫೋಗಟ್
ಹರಿಯಾಣ ಚುನಾವಣೆಯಲ್ಲಿ ಜೂಲಾನಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಕುಸ್ತಿಪಟು ವಿನೇಶ್ ಫೋಗಟ್ 6 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಪ್ಯಾರಿಸ್ನಲ್ಲಿ ನಡೆದ ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕದಿಂದ ವಂಚಿತಗೊಂಡಿದ್ದ ಅಂತಾರಾಷ್ಟ್ರೀಯ ಕುಸ್ತಿಪಟು ವಿನೇಶ್ ಫೋಗಟ್ ನಂತರ ಕಾಂಗ್ರೆಸ್ಗೆ ಸೇರಿ ಹರಿಯಾಣದ ಜೂಲಾನಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದರು.
ಆರಂಭದ ಮತ ಎಣಿಕೆಯಲ್ಲಿ ವಿನೇಶ್ ಫೋಗಟ್ ಅವರಿಗೆ ಮುನ್ನಡೆ ಸಿಕ್ಕಿದರೆ ನಂತರ ಬಿಜೆಪಿ ಅಭ್ಯರ್ಥಿ ಯೋಗೇಶ್ ಕುಮಾರ್ ಅವರಿಗೆ ಮುನ್ನಡೆ ಸಿಕ್ಕಿತ್ತು. ಅಂತಿಮ ಸುತ್ತುಗಳ ಮತ ಎಣಿಕೆಯಲ್ಲಿ ಕಾಂಗ್ರೆಸ್ ಹೆಚ್ಚು ಮತಗಳು ಬಿದ್ದ ಪರಿಣಾಮ ವಿನೇಶ್ ಫೋಗಟ್ ಮೊದಲ ಚುನಾವಣೆಯಲ್ಲಿ ಗೆದ್ದು ವಿಧಾನಸಭೆ ಪ್ರವೇಶಿಸಿದ್ದಾರೆ.